ಜಿಲ್ಲೆಯಲ್ಲಿ ಬಿಟ್ಟು, ಬಿಡದೆ ವರುಣ ಆರ್ಭಟ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಜಿಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮಲ್ಪೆ ಬೀಚ್ಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.
ಮಲ್ಪೆ ಬೀಚ್ಗೆ ಬೇಲಿ ಹಾಕಿ, ಬೀಚ್ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಅಲ್ಲದೆ, ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಮತ್ತು ಸುರಕ್ಷತೆಯ ದೃಷ್ಟಿಯಿಂದ ಉಡುಪಿ ಜಿಲ್ಲಾಡಳಿತ ಮತ್ತು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಅನೇಕ ಕ್ರಮಗಳನ್ನು ಕೈಗೊಂಡಿದೆ.
ಸುಮಾರು ಒಂದು ಕಿಲೋಮೀಟರ್ ಉದ್ದಕ್ಕೆ ಏಳು ಅಡಿ ಎತ್ತರದ ಬಲೆ ಅಳವಡಿಸಿ ತಡೆ ಬೇಲಿಯನ್ನು ಸದ್ಯಕ್ಕೆ ನಿರ್ಮಿಸಲಾಗಿದೆ. ಜೊತೆಗೆ ಎಚ್ಚರಿಕೆಯ ಕೆಂಪು ಬಾವುಟ ಹಾಕಲಾಗಿದೆ. ಇದರ ಜೊತೆಗೆ ಆಯಕಟ್ಟಿನ ಜಾಗದಲ್ಲಿ ಬೀಚ್ ಪ್ರವೇಶ ನಿಷೇಧದ ಎಚ್ಚರಿಕೆ ಫಲಕಗಳನ್ನು ಕೂಡ ಅಳವಡಿಸಲಾಗಿದೆ. ಮಲ್ಪೆ ಬೀಚಿನಲ್ಲಿ ತರಬೇತಿ ಪಡೆದ ಜೀವ ರಕ್ಷಕರನ್ನ ನಿಯೋಜನೆ ಮಾಡಲಾಗಿದೆ. ನಿರಂತರವಾಗಿ ಎಟಿಬಿ ಸ್ಯಾಂಡ್ ಬೈಕ್ ಮೂಲಕ ಬೀಚ್ನ್ನು ಗಸ್ತು ತಿರುಗುವ ಜೀವ ರಕ್ಷಕ ಪಡೆಯ ಸದಸ್ಯರು ಬೀಚ್ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಮುನ್ನೆಚ್ಚರಿಕೆಗಳನ್ನ ನೀಡುತ್ತಾ, ಅವರನ್ನು ರಕ್ಷಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮಳೆಗಾಲದ ಅರಿವೇ ಇಲ್ಲದ ಹೊರ ಜಿಲ್ಲೆ ಮತ್ತು ಹೊರರಾಜ್ಯದ ಪ್ರವಾಸಿಗರು ಮಲ್ಪೆ ಬೀಚ್ಗೆ ಇನ್ನೂ ಕೂಡ ಭೇಟಿ ನೀಡುತ್ತಿದ್ದು ಬೀಚ್ನ ನೀರಿನಲ್ಲಿ ಆಟವಾಡಲು ಅವಕಾಶ ಸಿಗದೆ ಇರುವ ಹಿನ್ನೆಲೆಯಲ್ಲಿ ಬೇಸರದಿಂದ ಹಿಂದಿರುಗುತ್ತಿದ್ದಾರೆ.