ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ನಟಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದ್ದು ಸದ್ಯ ಈ ಘಟನೆ ಗಾಂಧಿನಗರದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದೆ. ಮೈಸೂರಿನ ಫಾರ್ಮ್ಹೌಸ್ನಲ್ಲಿ ನಟ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ.
ದರ್ಶನ್ ಜೊತೆ ಪವಿತ್ರಾ ಗೌಡ ಆಪ್ತರಾಗಿದ್ದು, ದರ್ಶನ್ ಜೊತೆ ಇರೋ ಫೋಟೋಗಳನ್ನು ಪವಿತ್ರಾ ಗೌಡ ಆಗಾಗ ಶೇರ್ ಮಾಡುತ್ತಿರುತ್ತಾರೆ. ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು. ದರ್ಶನ್ ಸೂಚನೆ ಮೇಲೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಸದ್ಯ ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ಬಂಧಿಸಲಾಗಿದೆ.
ಜೂನ್ 9ರಂದು ಘಟನೆ ನಡೆದಿದ್ದು, ಚಿತ್ರದುರ್ಗದಿಂದ ರೇಣುಕಾ ಸ್ವಾಮಿ ಬೆಂಗಳೂರಿಕೆ ಕರೆದುಕೊಂಡು ಬರಲಾಗಿತ್ತು. ವಿನಯ್ ಎನ್ನುವವರಿಗೆ ಸೇರಿದ ಶೆಡ್ನಲ್ಲಿ ಅವರನ್ನು ಇರಿಸಿ ಅವರ ಮೇಲೆ ನಾಲ್ಕೈದು ಜನರಿಂದ ಹಲ್ಲೇ ನಡೆಸಲಾಗಿತ್ತು. ಈ ವೇಳೆ ದರ್ಶನ್ ಕೂಡ ಇದ್ದರು ಎನ್ನಲಾಗುತ್ತಿದೆ. ಹತ್ಯೆ ಮಾಡಿ ಮೃತದೇವನ್ನು ಮೋರಿಯಲ್ಲಿ ಎಸೆದು ಹೋಗಲಾಗಿತ್ತು. ವಿಜಯನಗರ ಎಸಿಪಿ ಚಂದನ್ ತಂಡದಿಂದ ದರ್ಶನ್ ವಶಕ್ಕೆ ಪಡೆಯಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ.