ನಟ ದರ್ಶನ್ ಅವರನ್ನು ರೇಣುಕಾಸ್ವಾಮಿ ಎಂಬುವವರ ಕೊಲೆ ಕೇಸ್ನಲ್ಲಿ ಬಂಧಿಸಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ. ದರ್ಶನ್ ಸ್ನೇಹಿತೆ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದ ಎನ್ನಲಾಗಿದೆ. ಈ ಕಾರಣಕ್ಕೆ ಅವರ ಮೇಲೆ ಕೆಲವರು ಹಲ್ಲೆ ಮಾಡಿದ್ದಾರೆ. ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ಮಾಡಿದ್ದೇವೆ ಎಂದು ಕೊಲೆ ಮಾಡಿರುವವರು ಒಪ್ಪಿಕೊಂಡಿದ್ದಾರೆ. ಈ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ವಿಚಾರವೊಂದು ಬೆಳಕಿಗೆ ಬಂದಿದೆ. ಪವಿತ್ರಾ ಮೇಲೆ ದರ್ಶನ್ ಹಲ್ಲೆ ಮಾಡಿದ್ದರು ಎನ್ನಲಾಗಿದೆ.
ದರ್ಶನ್ ಹಾಗೂ ಪವಿತ್ರಾ ಮಧ್ಯೆ ಕಳೆದ 10 ವರ್ಷಗಳಿಂದ ಆಪ್ತತೆ ಇದೆ. ಇಬ್ಬರೂ ಬೇರೆ ಬೇರೆ ಕಡೆಗಳಲ್ಲಿ ಸುತ್ತಾಡಿದ ಫೋಟೋಗಳನ್ನು ಹಂಚಿಕೊಂಡಿದ್ದರು. ಪವಿತ್ರಾಗೆ ಕಿರುಕುಳ ನೀಡಿದರು ಎನ್ನುವ ಕಾರಣಕ್ಕೆ ರೇಣುಕಾಸ್ವಾಮಿಯ ಕೊಲೆ ಆಯಿತು ಎನ್ನಲಾಗಿದೆ. ಈ ಮಧ್ಯೆ ಹಲ್ಲೆ ವಿಚಾರ ಚರ್ಚೆ ಆಗಿದೆ.
ರೇಣುಕಾಸ್ವಾಮಿ ಕೊಲೆ ಬಳಿಕ ಪವಿತ್ರಾ ಮೇಲೆ ದರ್ಶನ್ ಹಲ್ಲೆ ಮಾಡಿದ್ದರು ಎನ್ನಲಾಗಿದೆ. ‘ನಿನ್ನಿಂದ ಹೀಗೆಲ್ಲಾ ಆಯಿತು’ ಎಂದು ದರ್ಶನ್ ಕೂಗಾಡಿದ್ದರು ಎಂದು ವರದಿ ಆಗಿದೆ. ಹಲ್ಲೆಗೊಳಗಾದ ಪವಿತ್ರಾಗೆ ಬೆಂಗಳೂರಿನ ಆರ್ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಜೂನ್ 10ರಂದು ಪವಿತ್ರಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎನ್ನಲಾಗಿದೆ.