ಸಾರಿಗೆ ಇಲಾಖೆಯಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಹಿಂದಿನ ಸರ್ಕಾರದ ಅವಧಿಯಲ್ಲಿ ಖಾಲಿ ಹುದ್ದೆ ತುಂಬಿರಲಿಲ್ಲ. ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ ಸೇರಿ ನಾಲ್ಕು ನಿಗಮಗಳಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
2 ಸಾವಿರ ಹುದ್ದೆಗಳಿಗೆ ಈಗಾಗಲೇ ನೇಮಕಾತಿ ಮಾಡಿಕೊಳ್ಳಲಾಗಿದೆ. ಉಳಿದವು ನೇಮಕಾತಿ ಪ್ರಕ್ರಿಯೆಯಲ್ಲಿವೆ. 5800 ಹೊಸ ಬಸ್ ಗಳನ್ನು ಖರೀದಿ ಮಾಡಲಾಗುತ್ತಿದ್ದು, ಈಗಾಗಲೇ 2400 ಬಸ್ ಗಳ ಖರೀದಿ ಆಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಬಸ್ ಟಿಕೆಟ್ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವ ನಿರ್ಧಾರ ಕೈಗೊಂಡಿಲ್ಲ. ನಾಲ್ಕು ನಿಗಮಗಳಿಂದ ಪ್ರಸ್ತಾವ ಬಂದ ನಂತರ ಟಿಕೆಟ್ ದರ ಹೆಚ್ಚಳದ ಬಗ್ಗೆ ಪರಿಶೀಲಿಸುವುದಾಗಿ ಸಚಿವರು ತಿಳಿಸಿದ್ದಾರೆ