ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದಾರೆ ಎಂಬ ಕಾರಣಕ್ಕೆ ಸ್ಯಾಂಡಲ್ ವುಡ್ ನಟ ದರ್ಶನ್ ಸೇರಿ 13 ಮಂದಿಯನ್ನು ಬಂಧಿಸಲಾಗಿದೆ. ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ 13 ಆರೊಪಿಗಳನ್ನು ಕೋರಮಂಗಲದ 24ನೇ ಎಸಿಎಂಎಂ ಕೋರ್ಟ್ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.
ವಿಚಾರಣೆ ವೇಳೆ ಪೊಲೀಸರು 14 ದಿನಗಳ ಕಾಲ ಕಸ್ಟಡಿಗೆ ಕೇಳಿದ್ದರು. ನ್ಯಾಯಾಲಯ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ವಿಚಾರಣೆ ವೇಳೆ ನ್ಯಾಯಾಲಯ ದರ್ಶನ್ಗೆ ಯಾವುದಾದರೂ ತೊಂದರೆ ಆಗಿದೆಯೆ ಎಂದು ಕೇಳಿದ ಪ್ರಶ್ನೆಗೆ, ಇಲ್ಲ ಎಂದು ದರ್ಶನ್ ಪ್ರತಿಕ್ರಿಯಿಸಿದರು. ವಕೀಲರ ನೇಮಕ ಮಾಡಿಕೊಳ್ಳುತ್ತೀರಾ? ಎಂಬ ಪ್ರಶ್ನೆಗೆ, ಹೌದು ಎಂದರು. ಬಳಿಕ ಮನೆಯವರಿಗೆ ಬಂಧನದ ಮಾಹಿತಿ ನೀಡಿದ್ದೇನೆ ಎಂದು ನ್ಯಾಯಾಲಯಕ್ಕೆ ದರ್ಶನ್ ತಿಳಿಸಿದ್ದಾರೆ.
ಈ ವೇಳೆ ದರ್ಶನ್ ಪರ ವಕೀಲ ನಾರಾಯಣಸ್ವಾಮಿ, ದರ್ಶನ್ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ರೇಣುಕಾಸ್ವಾಮಿ ಶವ ಕೂಡ ಪತ್ತೆಯಾಗಿದೆ. ಇಷ್ಟೇ ಅಲ್ಲದೇ ದರ್ಶನ್ ವಿರುದ್ಧ ಯಾವುದೇ ಆರೋಪಗಳಿಲ್ಲ. ಅವರು ಎಲ್ಲೂ ತಪ್ಪಿಸಿಕೊಂಡಿಲ್ಲ. ತನಿಖೆಗೆ ಸಹಕಾರ ನೀಡುತ್ತಿದ್ದಾರೆ. ಹೀಗಾಗಿ ಪೊಲೀಸ್ ಕಸ್ಟಡಿ ಅಗತ್ಯವಿಲ್ಲ ಎಂದು ವಾದಿಸಿದರು.
ವಿಚಾರಣೆ ಬಳಿಕ 6ನೇ ಎಸಿಎಂಎಂ ನ್ಯಾಯಾಧೀಶ ವಿಶ್ವನಾಥ್ ಗೌಡರ್, ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ. ವಿಚಾರಣೆ ವೇಳೆ ದರ್ಶನ್ ಹಾಗೂ ಪವಿತ್ರಾ ಗೌಡ ನಾಯಾಧೀಶರ ಮುಂದೆ ಕಣ್ಣೀರಿಟ್ಟಿದ್ದಾರೆ.