ಸದ್ಯ ನಟಿ ತಮನ್ನಾ ಭಾಟಿಯಾ ಹಾಗೂ ವಿಜಯ್ ವರ್ಮಾ ಡೇಟಿಂಗ್ ವಿಚಾರ ಸಖತ್ ಸದ್ದು ಮಾಡುತ್ತಿದೆ. ಇಬ್ಬರ ಡೇಟಿಂಗ್ ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಈ ವಿಚಾರಕ್ಕೆ ಇದೀಗ ನಟಿ ತಮನ್ನಾ ಸಂದರ್ಶನವೊಂದರಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಮಿಲ್ಕಿ ಬ್ಯೂಟಿ ತಮನ್ನಾ ಸದ್ಯ ಸಿನಿಮಾಗಿಂತ ಬಾಲಿವುಡ್ ನಟ ವಿಜಯ್ ವರ್ಮಾ ಜೊತೆಗಿನ ಲವ್ವಿ- ಡವ್ವಿ ವಿಷ್ಯವಾಗಿಯೇ ಸಖತ್ ಸುದ್ದಿಯಲ್ಲಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ನಟಿಯ ಲಿಪ್ ಲಾಕ್ ವೀಡಿಯೋ ವೈರಲ್ ಆದ ಮೇಲೆ ಇದೀಗ ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ಸ್ಪಷ್ಟನೆ ನೀಡಿದ್ದಾರೆ.
ವಿಜಯ್ ವರ್ಮಾ ಜೊತೆಗಿನ ಡೇಟಿಂಗ್ ವದಂತಿಯನ್ನು ತಮನ್ನಾ ತಳ್ಳಿ ಹಾಕಿದ್ದಾರೆ. ನಾವಿಬ್ಬರೂ ಒಟ್ಟಿಗೆ ಸಿನಿಮಾ ಮಾಡುತ್ತಿದ್ದೇವೆ. ಇಂಥ ವದಂತಿಗಳು ಎಲ್ಲಾ ಕಡೆ ಹರಿದಾಡುತ್ತಲೇ ಇರುತ್ತದೆ. ಇಂಥ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡುವುದು ಮತ್ತು ಸ್ಪಷ್ಟೀಕರಣ ಕೊಡುವ ಅನಿವಾರ್ಯತೆ ಇಲ್ಲ. ಅದರ ಬಗ್ಗೆ ನಾನು ಹೆಚ್ಚು ಏನು ಹೇಳಲ್ಲ ಎಂದಿದ್ದಾರೆ.
ತಮನ್ನಾ ಮತ್ತು ವಿಜಯ್ ವರ್ಮಾ ʻಲಸ್ಟ್ ಸ್ಟೋರಿ -2′ ಸಿನಿಮಾ ಸೆಟ್ನಲ್ಲಿ ಮೊದಲು ಭೇಟಿಯಾಗಿದ್ದು, ಆ ಬಳಿಕ ಸ್ನೇಹ ಬಳಿಕ ಪ್ರೀತಿಯಾಗಿ ಬದಲಾಗಿದೆ ಎನ್ನಲಾಗುತ್ತಿದೆ. ಇಬ್ಬರೂ ಕದ್ದು ಮುಚ್ಚಿ ಪ್ರೀತಿ ಮಾಡುತ್ತಿದ್ದರು. ಆದರೆ ಹೊಸ ವರ್ಷಾಚರಣೆ ವೇಳೆ ಇಬ್ಬರೂ ತಬ್ಬಿಕೊಂಡು, ಕಿಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಇಬ್ಬರ ಪ್ರೀತಿ ಬಹಿರಂಗವಾಗಿದೆ.