ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್ ಜೈಲು ಸೇರಿದ್ದಾರೆ. ಇವರ ಜೊತೆ ಇನ್ನೂ 13 ಮಂದಿ ಅರೆಸ್ಟ್ ಆಗಿದ್ದು ಸದ್ಯ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಘಟನೆಯ ಬಳಿಕ ದರ್ಶನ್ ಪತ್ನಿ ವಿಜಯಲಕ್ಷ್ಮೀ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲೂ ಯಾವುದೇ ಪೋಸ್ಟ್ ಹಾಕಿಲ್ಲ. ಅಲ್ಲದೆ ವಿಜಯಲಕ್ಷ್ಮಿ ಇನ್ಸ್ಟಾಗ್ರಾಮ್ ಪ್ರಾಫೈಲ್ ಫೋಟೋನ ಡಿಲೀಟ್ ಮಾಡಿರುವುದರ ಜೊತೆಗೆ ದರ್ಶನ್ ಅವರನ್ನು ಅನ್ಫಾಲೋ ಮಾಡಿದ್ದಾರೆ. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.
ಕೆಲ ತಿಂಗಳ ಹಿಂದೆ ಪವಿತ್ರಾ ಗೌಡ ಅವರು ದರ್ಶನ್ ಜೊತೆ ಇರೋ ಫೋಟೋ ಹಂಚಿಕೊಂಡಿದ್ದರು. ‘10 ವರ್ಷಗಳ ಸಂಬಂಧ’ ಎಂದು ಟ್ಯಾಗ್ಲೈನ್ ನೀಡಿದ್ದರು. ಇದನ್ನು ವಿಜಯಲಕ್ಷ್ಮಿ ಖಂಡಿಸಿದ್ದರು. ಇಬ್ಬರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ವಾರ್ ನಡೆದಿತ್ತು. ಆ ಬಳಿಕ ಎಲ್ಲವೂ ಸೈಲೆಂಟ್ ಆಗಿತ್ತು. ಜೊತೆಗೆ ಇತ್ತೀಚೆಗೆ ದರ್ಶನ್ ವಿಜಯಲಕ್ಷ್ಮಿ ಜೊತೆ ದುಬೈಗೆ ತೆರಳಿದ್ದು ಅಲ್ಲಿ ಆನಿವರ್ಸರಿ ಸೆಲೆಬ್ರೇಟ್ ಮಾಡಿದ್ದರು. ಅದರ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ವೇಳೆ ಪವಿತ್ರಾ ಗೌಡ ಕರ್ಮ ರಿಟರ್ನ್ಸ್ ಎನ್ನುವ ಪೋಸ್ಟ್ ಹಂಚಿಕೊಂಡಿದ್ದರು. ಎಲ್ಲವು ಸರಿ ಹೋಗಿದೆ ಎಂದು ವಿಜಯಲಕ್ಷ್ಮಿ ಖುಷಿ ಖುಷಿಯಾಗಿ ಇರೋವಾಗ್ಲೆ ದರ್ಶನ್ ಅವರು ಪವಿತ್ರಾಗಾಗಿ ಕೊಲೆ ಮಾಡಿದರು ಎನ್ನುವ ಆರೋಪ ಹೊತ್ತಿರೋದು ಶಾಕ್ ಆಗಿದೆ.
ಇನ್ಸ್ಟಾಗ್ರಾಮ್ನಲ್ಲಿ ದರ್ಶನ್ ರನ್ನು ವಿಜಯಲಕ್ಷ್ಮಿ ಅನ್ಫಾಲೋ ಮಾಡಿದ್ದಾರೆ. ಈ ಮೊದಲು ಅವರು ದರ್ಶನ್ನ ಫಾಲೋ ಮಾಡುತ್ತಿದ್ದರು. ಇನ್ನು, ಇನ್ಸ್ಟಾಗ್ರಾಮ್ ಡಿಪಿಯನ್ನು ಕೂಡ ತೆಗೆದು ಹಾಕಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ.
ಪವಿತ್ರಾ ಗೌಡಗೆ ಇವರು ಅಶ್ಲೀಲ ಸಂದೇಶ ಹಾಗೂ ಫೋಟೋ ಕಳುಹಿಸುತ್ತಿದ್ದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವವರು ಕೊಲೆ ಮಾಡಲಾಗಿದೆ. ಈ ಆರೋಪದ ಮೇಲೆ ದರ್ಶನ್, ಪವಿತ್ರಾ ಸೇರಿ 13 ಜನರನ್ನು ಬಂಧಿಸಲಾಗಿದೆ.