ಫೋಕ್ಸೋ ಪ್ರಕರಣದಲ್ಲಿ ಅಗತ್ಯವೆನಿಸಿದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸುತ್ತಾರೆ ಎಂದು ಗೃಹಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸಲಿದ್ದಾರೆ.
ಯಡಿಯೂರಪ್ಪ ಬಂದು ನೋಟಿಸ್ಗೆ ಉತ್ತರ ನೀಡಬೇಕಾಗುತ್ತದೆ ಎಂದರು.
ಪ್ರಕರಣಕ್ಕೆ ಸಂಬಂಧಿಸಿ ಜೂನ್ 15ರೊಳಗೆ ಚಾರ್ಜ್ಶೀಟ್ ಸಲ್ಲಿಸಬೇಕು ಎಂದು ಇದೆ. ಹೀಗಾಗಿ ಯಡಿಯೂರಪ್ಪನವರಿಗೆ ನೋಟಿಸ್ ಕೊಟ್ಟಿದ್ದಾರೆ. ಅಗತ್ಯ ಬಿದ್ರೆ ಸಿಐಡಿಯವರು ಯಡಿಯೂರಪ್ಪರನ್ನ ಬಂಧಿಸ್ತಾರೆ. ಈ ಬಗ್ಗೆ ನಾನು ಏನೂ ಹೇಳಲು ಆಗದು ಎಂದು ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.