ಬಂಟ್ವಾಳ ದ ಬೋಳಿಯಾರಿನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣ ಇದೀಗ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿಪಕ್ಷ ಬಿಜೆಪಿ ನಡುವಿನ ತೀವ್ರ ಜಟಾಪಟಿಗೆ ಕಾರಣವಾಗಿದೆ . ಬಿಜೆಪಿ ಕಾರ್ಯಕರ್ತರು ಮಸೀದಿ ಮುಂದೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದೇ ದುರ್ಘಟನೆಗೆ ಕಾರಣ ಎಂದು ಹೇಳುತ್ತಿರುವ ಪೊಲೀಸರು ಅದನ್ನು ಸಾಬೀತು ಪಡಿಸಲಿ ಎಂದು ವಿಪಕ್ಷ ನಾಯಕ ಅಶೋಕ್ ಸವಾಲು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಹರಿಹಾಯ್ದಿರುವ ಅವರು ಇದು ತಾಲಿಬಾನ್ ಸರ್ಕಾರದಂತೆ ವರ್ತಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೋಳಿಯಾರಿನಲ್ಲಿ ನಡೆದ ಚೂರಿ ಇರಿತ ಪ್ರಸಂಗ ಒಂದು ಪೂರ್ವಯೋಚಿತ ಕೊಲೆ ಯತ್ನವಾಗಿದೆ. ಮೋದಿ ವಿಜಯೋತ್ಸವದ ವೇಳೆ ಬಿಜೆಪಿ ಭಾರತ್ ಮಾತಾ ಕೀ ಜೆ ಎಂದು ಘೋಷಣೆ ಕೂಗುತ್ತಿದ್ದ ಕಾರ್ಯಕರ್ತರಿಗೆ ಘಾಸಿ ಮಾಡುವುದೇ ಉದ್ದೇಶದಂತಿತ್ತು ಎಂದು ಆರೋಪಿಸಿದ್ದಾರೆ.