ರೇಣುಕಾಗೌಡ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ದರ್ಶನ್ ರ ಈ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ನಟ, ನಟಿಯರು, ರಾಜಕೀಯ ಮುಖಂಡರು ಘಟನೆಯನ್ನು ಖಂಡಿಸಿದ್ದಾರೆ. ಪ್ರಕರಣದ ಕುರಿತು ದರ್ಶನ್ ಮೊದಲ ಪತ್ನಿ ವಿಜಯಲಕ್ಷ್ಮೀ ಇದುವರೆಗೂ ಯಾವುದೇ ಕಾಮೆಂಟ್ ಮಾಡಿಲ್ಲ. ಆದರೆ, ತಮ್ಮ ಸೋಶಿಯಲ್ ಅಕೌಂಟ್ನಲ್ಲಿ ದರ್ಶನ್ ಜೊತೆಗಿದ್ದ ಫೋಟೋವನ್ನು ಅವರು ಡಿಲೀಟ್ ಮಾಡಿದ್ದಾರೆ. ಇನ್ನು ತಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಅನ್ನೇ ಅವರು ಡಿಆಕ್ಟಿವೇಟ್ ಮಾಡಿದ್ದಾರೆ ಎನ್ನುವ ಸುದ್ದಿ ಇದೆ. ಇದರ ನಡುವೆ ದರ್ಶನ್ ಹಾಗೂ ವಿಜಯಲಕ್ಷ್ಮೀ ಅವರ ಪುತ್ರ ವಿನೇಶ್ ಸೋಶಿಯಲ್ ಮೀಡಿಯಾದಲ್ಲಿ ಘಟನೆಯ ಕುರಿತು ಬರೆದುಕೊಂಡಿದ್ದಾರೆ.
ನನ್ನ ತಂದೆ ಬಗ್ಗೆ ಕೆಟ್ಟ ಕಾಮೆಂಟ್ಸ್ ಮತ್ತು ಅಸಭ್ಯ ಭಾಷೆಯಲ್ಲಿ ನಿಂದನೆ ಮಾಡುತ್ತಿರುವರಿಗೆ ಧನ್ಯವಾದಗಳು. ನನಗೆ 15 ವರ್ಷ, ನನಗೂ ಮನಸಿದೆ, ಈ ಕಷ್ಟದ ಸಮಯದಲ್ಲಿ ನನ್ನ ತಾಯಿ ಮತ್ತು ತಂದೆಗೆ ನಿಮ್ಮ ಬೆಂಬಲದ ಅಗತ್ಯವಿದೆ. ನನಗೆ ಶಾಪ ಹಾಕಿದ್ರೆ ಯಾವ ಬದಲಾವಣೆಯೂ ಆಗೋದಿಲ್ಲ’ ಎಂದು ವಿನೇಶ್ ಬರೆದುಕೊಂಡಿದ್ದಾರೆ. ಎಲ್ಲರಿಗೂ ಥ್ಯಾಂಕ್ಸ್ ಎಂದು ಕೆಳಗೆ ಇಮೋಜಿಯನ್ನೂ ಕೂಡ ಹಂಚಿಕೊಂಡಿದ್ದಾರೆ.
ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಎನ್ನುವ ಒಂದೇ ಒಂದು ಕಾರಣಕ್ಕೆ ಚಿತ್ರದುರ್ಗದಿಂದ ರೇಣುಕಾಸ್ವಾಮಿ ಎನ್ನುವ ವ್ಯಕ್ತಿಯನ್ನು ಕಿಡ್ನಾಪ್ ಮಾಡಿಕೊಂಡು ಬಂದಿದ್ದ ದರ್ಶನ್ & ಗ್ಯಾಂಗ್, ಆತನಿಗೆ ಪಟ್ಟಣಗೆರೆ ಬಳಿಯ ಶೆಡ್ನಲ್ಲಿ ಚಿತ್ರಹಿಂಸೆ ನೀಡಿ ಕೊಂದಿದ್ದರು. ರೇಣುಕಾಸ್ವಾಮಿಗೆ ಬಲವಾಗಿ ಹಲ್ಲೆ ಮಾಡಲಾಗಿದೆ, ಆತನ ಮರ್ಮಾಂಗದ ಮೇಲೆ ಅತ್ಯಂತ ಅಮಾನವೀಯ ರೀತಿಯಲ್ಲ ಹಲ್ಲೆ ಮಾಡಲಾಗಿತ್ತು ಎನ್ನುವುದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಗೊತ್ತಾಗಿದೆ.
ಈ ಕೇಸ್ನಲ್ಲಿ ದರ್ಶನ್ ಸೇರಿದಂತೆ 13 ಜನ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಎಲ್ಲರನ್ನೂ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಆ ಬಳಿಕ ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಮಾಡಿರುವ ತಪ್ಪಿಗೆ ಶಿಕ್ಷೆಯಾಗಲೇಬೇಕು ಎಂದು ಒತ್ತಾಯ ಕೇಳಿ ಬರುತ್ತಿದೆ.