ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಸೇನೆಯ ಚೆಕ್ಪೋಸ್ಟ್ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದ ನಾಲ್ವರು ಉಗ್ರರ ರೇಖಾಚಿತ್ರವನ್ನು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಭಯೋತ್ಪಾದಕರ ಬಂಧನಕ್ಕೆ ಸುಳಿವು ನೀಡಿದವರಿಗೆ 20 ಲಕ್ಷ ರೂ.
ಬಹುಮಾನ ನೀಡುವುದಾಗಿ ಕಾಶ್ಮೀರ ಪೊಲೀಸರು ಘೋಷಿಸಿದ್ದಾರೆ.
ಉಗ್ರರು ಭದರ್ವಾ, ಥಾತ್ರಿ, ಗಂಡೋಹ್ನ ಮೇಲ್ಭಾಗದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಪ್ರತಿ ಭಯೋತ್ಪಾದಕರ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ನಗದು ಬಹುಮಾನವನ್ನೂ ಘೋಷಿಸಲಾಗಿದೆ. ಈ ಭಯೋತ್ಪಾದಕರ ಉಪಸ್ಥಿತಿ ಮತ್ತು ಚಲನವಲನದ ಬಗ್ಗೆ ಮಾಹಿತಿ ನೀಡುವಂತೆ ಜನರಿಗೆ ಮಾಹಿತಿ ನೀಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.