ಲಂಡನ್: ಸ್ಟಾರ್ಟ್ ಅಪ್ಗಳಿಗೆ ಸಾಲ ನೀಡಲು ಹೆಸರು ವಾಸಿಯಾಗಿದ್ದ ಸಿಲಿಕಾನ್ ವ್ಯಾಲಿ ಬ್ಯಾಂಕ್ ಅಮೆರಿಕದಲ್ಲಿ ದಿವಾಳಿಯಾಗಿರುವ ಬೆನ್ನಲ್ಲೇ ಸಿಲಿಕಾನ್ ವ್ಯಾಲಿ ಬ್ಯಾಂಕಿನ ಬ್ರಿಟನ್ ಘಟಕವನ್ನು ಹೆಚ್ಎಸ್ಬಿಸಿ ಕೇವಲ 1 ಪೌಂಡ್ಗೆ (99.86 ರೂಪಾಯಿ) ಖರೀದಿ ಮಾಡಿದೆ.
ಮಾರ್ಚ್ 10ರ ಹೊತ್ತಿಗೆ ಸಿಲಿಕಾನ್ ವ್ಯಾಲಿ ಬ್ಯಾಂಕ್ ಯುಕೆ ಘಟಕವು ಸುಮಾರು 5.5 ಬಿಲಿಯನ್ ಪೌಂಡ್ ಸಾಲಗಳನ್ನು ಮತ್ತು ಸುಮಾರು 6.7 ಬಿಲಿಯನ್ ಪೌಂಡ್ ಠೇವಣಿ ಹೊಂದಿದೆ. ಜೊತೆಗೆ ಒಟ್ಟು 8.8 ಶತಕೋಟಿ ಪೌಂಡ್ಗಳಷ್ಟು ಬ್ಯಾಲೆನ್ಸ್ ಶೀಟ್ ಗಾತ್ರವನ್ನು ಹೊಂದಿದೆ. ಇದೀಗ ಹೂಡಿಕೆದಾರರಲ್ಲಿ ಮತ್ತಷ್ಟು ಉತ್ಸಾಹ ತುಂಬಲು ಹೆಚ್ಎಸ್ಬಿಸಿ ಈ ಕ್ರಮಕ್ಕೆ ಮುಂದಾಗಿದೆ ಎಂದು ಹೇಳಲಾಗಿದೆ.
ಬ್ಯಾಂಕ್ನ ಬ್ರಿಟನ್ ವ್ಯವಹಾರಕ್ಕೆ ಇದು ಅತ್ಯುತ್ತಮ ಕಾರ್ಯತಂತ್ರದ ಅರ್ಥ ನೀಡುವ ಜೊತೆಗೆ ವಾಣಿಜ್ಯ ಬ್ಯಾಂಕಿಂಗ್ ಅನ್ನು ಬಲಪಡಿಸುತ್ತದೆ. ಅಷ್ಟೇ ಅಲ್ಲದೆ ಬ್ರಿಟನ್ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ತಂತ್ರಜ್ಞಾನ ಹಾಗೂ ಜೀವ-ವಿಜ್ಞಾನ ಕ್ಷೇತ್ರಗಳನ್ನು ಒಳಗೊಂಡಂತೆ ನವೀನ ಮತ್ತು ವೇಗವಾಗಿ ಬೆಳೆಯುತ್ತಿರುವ ಸಂಸ್ಥೆಗಳಿಗೆ ಸೇವೆ ಸಲ್ಲಿಸುವ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಬ್ರಿಟನ್ನ ಬ್ಲೂ-ಚಿಪ್ FTSC 100 ಷೇರುಗಳ ಸೂಚ್ಯಂಕವು ಆರಂಭಿಕ ವಹಿವಾಟಿನಲ್ಲಿ ಶೇ.1ರಷ್ಟು ಕಡಿಮೆಯಾಗಿದೆ. ಸಿಲಿಕಾನ್ ವ್ಯಾಲಿಬ್ಯಾಂಕ್ ಮೌಲ್ಯ ಕುಸಿತದಿಂದ ಎಚ್ಎಸ್ಬಿಸಿ ಷೇರುಗಳು ಶೇ.1.7ರಷ್ಟು ಕುಸಿದಿವೆ ಎಂದು ಹೇಳಲಾಗುತ್ತಿದೆ.
ಆರ್ಥಿಕ ಹಿಂಜರಿತದ ಭೀತಿಯ ನಡುವೆ ಅಮೆದಿಕದ ದೊಡ್ಡ-ದೊಡ್ಡ ಬ್ಯಾಂಕ್ಗಳು ದಿವಾಳಿ ಹಂತ ತಲುಪಿತ್ತಿರುವುದು ಮತ್ತಷ್ಟು ಆತಂಕ ಮೂಡಿಸಿದೆ.