ರೇಣುಕಾಸ್ವಾಮಿ ಹತ್ಯೆಯ ಕುರಿತು ದಿನದಿಂದ ದಿನಕ್ಕೆ ಒಂದೊಂದೆ ಮುಖ ಬಲಯಾಗುತ್ತಿದೆ. ರೇಣುಕಾಸ್ವಾಮಿಗೆ ಚಿತ್ರ ಹಿಂಸೆ ನೀಡಿ ಕಲೆ ಮಾಡಿದ ದುಷ್ಕರ್ಮಿಗಳು ಬಳಿಕ ಆತನ ಮೈಮೇಲಿದ್ದ ಒಡವೆಗಳನ್ನು ದೋಚಿರುವುದು ತನಿಖೆಯ ವೇಳೆ ಬಯಲಾಗಿದೆ.
ರೇಣುಕಾಸ್ವಾಮಿ ಬರ್ಬರ ಕೊಲೆಯ ಬಳಿಕ ಅವರ ಮೈಮೇಲಿದ್ದ ಚಿನ್ನಾಭರಣವನ್ನು ಕಳವು ಮಾಡಲಾಗಿದೆ. ಪೊಲೀಸರ ತನಿಖೆ ವೇಳೆ ಈ ಸ್ಫೋಟಕ ಮಾಹಿತಿಯನ್ನು ಆರೋಪಿ ರವಿ ಬಾಯ್ಬಿಟ್ಟಿದ್ದಾನೆ. ರೇಣುಕಾಸ್ವಾಮಿ ಮೈಮೇಲಿದ್ದ ಚಿನ್ನವನ್ನು ಆರೋಪಿ ಜಗ್ಗ ದೋಚಿದ್ದಾನೆ ಎಂದು ಪೊಲೀಸರ ಮುಂದೆ ರವಿ ಸತ್ಯ ಬಾಯಿ ಬಿಟ್ಟಿದ್ದಾನೆ.
ಸುಮ್ಮನಹಳ್ಳಿ ಬಳಿ ರೇಣುಕಾಸ್ವಾಮಿ ಶವವನ್ನ ಎಸೆದು ಬಳಿಕ ಪೊಲೀಸ್ ಠಾಣೆಗೆ ಶರಣಾಗುವಂತೆ ಹೇಳಿದರು. ಆದರೆ ಭಯದಿಂದ ಠಾಣೆಗೆ ಹೋಗದೆ ಕಾರಿನಲ್ಲಿ ಚಿತ್ರದುರ್ಗಕ್ಕೆ ಬಂದೆ. ಕಾರಿನಲ್ಲಿ ಜಗ್ಗನ ಜೊತೆ ಚಿತ್ರದುರ್ಗಕ್ಕೆ ಬಂದುಬಿಟ್ಟೆ. ಆರೋಪಿ ಜಗ್ಗ ಚಿನ್ನಾಭರಣ ತೆಗೆದುಕೊಂಡು ಬಂದಿದ್ದ ಎಂದು ರವಿ ಹೇಳಿದ್ದಾನೆ.