ಚುನಾವಣೆ ಫಲಿತಾಂಶಕ್ಕೂ, ಪೆಟ್ರೋಲ್-ಡೀಸೆಲ್ ಏರಿಕೆಗೂ ಸಂಬಂಧ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,, ವಿಜಯಪುರದಲ್ಲಿ ನಾವು ಸೋತಿದ್ದೇವೆ.
ಕರ್ನಾಟಕದಲ್ಲೂ ನಾವು ನಿರೀಕ್ಷೆ ಮಾಡಿದಷ್ಟು ಸ್ಥಾನಗಳು ಬಂದಿಲ್ಲ. ವಿಜಯಪುರದಲ್ಲಿ ಗೆಲ್ಲುತ್ತೇವೆ ಎಂಬ ನಿರೀಕ್ಷೆಯಿತ್ತು. ಕರ್ನಾಟಕದಲ್ಲಿ ಕಳೆದ ಚುನಾವಣೆಗೆ ಹೋಲಿಕೆ ಮಾಡಿದರೆ, ಈ ಬಾರಿ ಒಂಬತ್ತು ಸ್ಥಾನಗಳನ್ನು ಗಳಿಸಿದ್ದೇವೆ. ಬಿಜೆಪಿ ಕಳೆದ ಬಾರಿ 25 ಇದ್ದದ್ದು ಈ ಬಾರಿ 19 ಕ್ಕೆ ಇಳಿದಿದೆ. ನಮಗೆ 13% ಮತ ಹಂಚಿಕೆಯಾಗಿದೆ. ನಾವು ಸೋತಿದ್ದೇವೆಯೇ? ನಮ್ಮ ಲೆಕ್ಕಾಚಾರದ ಪ್ರಕಾರ, ನಿರೀಕ್ಷೆ ಮಾಡಿದಷ್ಟು ಸ್ಥಾನಗಳು ಬಂದಿಲ್ಲ ಅಷ್ಟೇ ಎಂದರು
ಚುನಾವಣೆಯಲ್ಲಿ ಸೋತಿರುವುದು ಬಿಜೆಪಿ. ಕಳೆದ ಬಾರಿ 303 ಸ್ಥಾನಗಳನ್ನು ಪಡೆದು ಈ ಬಾರಿ 240 ಸ್ಥಾನಗಳನ್ನು ಪಡೆದು ಬಿಜೆಪಿ ಸೋತಿದೆ. ಕಳೆದ ಬಾರಿ 31% ಈ ಬಾರಿ 41% ಮತ ಹಂಚಿಕೆಯಾಗಿದೆ. 15 ಸ್ಥಾನ ಬರಬಹುದೆಂಬ ನಿರೀಕ್ಷೆಯಿತ್ತು. ನಾವು ಸೋತಿದ್ದೇವೆಯೇ ಎಂದರು. ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಕಡಿಮೆ ಮತ ಬಂದಿದೆ, ಮೋದಿ ಅಲೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. 2021ರ ಏಪ್ರಿಲ್ 11ರಂದು ಪೆಟ್ರೋಲ್ ಮೇಲೆ ಶೇ.35 ತೆರಿಗೆ ಹಾಗೂ ಡೀಸೆಲ್ ಮೇಲೆ ಶೇ.24 ತೆರಿಗೆ ಹಾಕುತ್ತಿದ್ದರು. ನಂತರ ಕೇಂದ್ರದಲ್ಲಿ ಇಳಿಕೆ ಮಾಡಿದ್ದರಿಂದ ಇವರೂ 35 ರಿಂದ 25.92 ಕ್ಕೆ ನಂತರ ಇಳಿಸಿದರು. ಡೀಸೆಲ್ ಮೇಲೆ 14.34ಕ್ಕೆ ಇಳಿಸಿದರು. ಶೇ.7ರೂಪಾಯಿಯಷ್ಟು ಕಡಿಮೆ ಮಾಡಿದರು. ಏಕೆಂದರೆ ಕೇರಳ ಆಗಲಿ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ, ತಮಿಳುನಾಡು ಕಡಿಮೆ ಮಾಡಲಿಲ್ಲ. ಈಗ ಕರ್ನಾಟಕದಲ್ಲಿ 99.85 ರೂ ಪೆಟ್ರೋಲ್ ಬೆಲೆಯಿದೆ. ನಿನ್ನೆಯಿಂದ ಮೂರು ರೂಪಾಯಿ ಹೆಚ್ಚು ಮಾಡಿದ್ದೇವೆ. 102 ರೂ.ಗೆ ಹೆಚ್ಚಾಗಿದೆ. ಇದು ತಮಿಳುನಾಡಿಗೆ ಸಮವಾಗಿದೆ. ಕೇರಳದ ಕಾಸರಗೋಡಿನಲ್ಲಿ 106.66 ರೂ.ಗಳಿದೆ. ಆಂಧ್ರದ ಅನಂತಪುರದಲ್ಲಿ 109.44 , ತೆಲಂಗಾಣದ ಹೈದರಾಬಾದ್ನಲ್ಲಿ 107.40 ಹಾಗೂ ಮಹಾರಾಷ್ಟ್ರದಲ್ಲಿ 104.46 ರೂ.ಇದೆ. ಇವೆಲ್ಲಕ್ಕೆ ಹೋಲಿಸಿದರೆ ನಮ್ಮ ದರ ಕಡಿಮೆ ಇದೆ ಎಂದರು