ಲೋಕಸಭೆ ಚುನಾವಣೆ ಫಲಿತಾಂಶ ಬಂದ ಕೂಡಲೇ ಕಾಂಗ್ರೆಸ್ ಸರಕಾರ ಯಾರೂ ಊಹಿಸದಂತೆ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ನ ಬೆಲೆಯನ್ನು ಹೆಚ್ಚಳ ಮಾಡಿ ರಾಜ್ಯದ ಜನತೆಗೆ ಬರೆ ಎಳೆಯುವ ಕೆಲಸ ಮಾಡಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏಕಾಏಕಿ 3.50 ರೂ. ಹೆಚ್ಚಾಳ ಮಾಡಿರುವ ರಾಜ್ಯ ಸರಕಾರದ ನಡೆ ಖಂಡನೀಯ ಎಂದು ಕಿಡಿಕಾರಿದರು.
ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಹತಾಶೆಗೊಂಡಿದೆ. ಸರಕಾರ ಬೇಜಾವಾಬ್ದಾರಿ ತನದಿಂದ ನಡೆದುಕೊಳ್ಳುತ್ತಿರುವುದನ್ನು ನಾವುಗಳು ನೋಡಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯ ಸರಕಾರಕ್ಕೆ ಜನರು ಶಾಪ ಹಾಕುತಿದ್ದಾರೆ. ಭರಗಾಲದಿಂದ ಈಗತಾನೆ ಹೊರಬಂದ ರೈತರು ಕಂಗಾಲಾಗಿದ್ದಾರೆ. ತರಕಾರಿ ಬೆಲೆ ಏರಿಕೆ ಜಾಸ್ತಿಯಾಗಿದೆ. ರೈತರು ಹೆಚ್ಚಾಗಿ ಟ್ರಾಕ್ಟರ್ಗಳು ಬಳಸುತ್ತಿದ್ದು, ಅವರಿಗೂ ರಾಜ್ಯ ಸರಕಾರ ಬರೆ ಹಾಕಿದಂತಾಗಿದೆ ಎಂದು ಆರೋಪಿಸಿದರು.