ಇಂದು ಸ್ವಕ್ಷೇತ್ರ ವಾರಾಣಸಿಗೆ ಇಂದು ನರೇಂದ್ರ ಮೋದಿ ಭೇಟಿ ಕೊಡಲಿದ್ದಾರೆ. ಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡ ನಂತರ ಅವರ ಮೊದಲ ಭೇಟಿ ಇದಾಗಿದೆ. ಅವರು ರೈತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ
9.26 ಕೋಟಿಗೂ ಹೆಚ್ಚು ರೈತರಿಗೆ ಆದಾಯ ಬೆಂಬಲ ಯೋಜನೆಯ ಭಾಗವಾಗಿ ಪ್ರಧಾನ ಮಂತ್ರಿ 20,000 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಸಂಜೆ 7 ಗಂಟೆಗೆ ದಶಾಶ್ವಮೇಧ ಘಾಟ್ನಲ್ಲಿ ಗಂಗಾ ಆರತಿಗೆ ಪ್ರಧಾನಿ ಮೋದಿ ಸಾಕ್ಷಿಯಾಗಲಿದ್ದಾರೆ. ರಾತ್ರಿ 8 ಗಂಟೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪೂಜೆ ನೆರವೇರಿಸಲಿದ್ದಾರೆ.
ಬೆಳಗ್ಗೆ 10.30ರ ಸುಮಾರಿಗೆ ಬಿಹಾರದ ರಾಜ್ಗಿರ್ನಲ್ಲಿರುವ ನಳಂದ ವಿಶ್ವವಿದ್ಯಾಲಯದ ಆವರಣವನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.