ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕೊಳಗಾಗಿ ಸದ್ಯ ವಿಚಾರಣೆಯಲ್ಲಿರೋ ನಟ ದರ್ಶನ್ ಡಿಎನ್ ಎ ಪರೀಕ್ಷೆಗೆ ಒಳಪಡಿಸಲಾಗಿದೆ. ಈಗಾಗಲೇ ಹಲವು ಸುತ್ತಿನ ವಿಚಾರಣೆ ನಡೆಸಲಾಗಿದೆ. ವಿವಿಧ ಸ್ಥಳಗಳಲ್ಲಿ ಮಹಜರು ಮಾಡಲಾಗಿದೆ. ಈ ಮೂಲಕ ನೂರಾರು ಬಗೆಯ ಸಾಕ್ಷ್ಯಗಳನ್ನು ಕಲೆ ಹಾಕಲಾಗಿದ್ದು ಇದೀಗ ಡಿಎನ್ ಎ ಟೆಸ್ಟ್ ಕೂಡ ಮಾಡಲಾಗಿದೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದರ್ಶನ್, ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳಿಗೆ ಡಿಎನ್ಎ ಪರೀಕ್ಷೆ ಮಾಡಲಾಗಿದೆ. ಒಟ್ಟು 9 ಆರೋಪಿಗಳ ಸ್ಯಾಂಪಲ್ಸ್ ಪಡೆದುಕೊಳ್ಳಲಾಗಿದೆ. ಆರೋಪಿಗಳ ರಕ್ತ ಮತ್ತು ಕೂದಲಿನ ಮಾದರಿ ಸಂಗ್ರಹಿಸಲಾಗಿದೆ. ರೇಣುಕಾ ಸ್ವಾಮಿ ಹತ್ಯೆ ನಡೆದ ಸ್ಥಳದಲ್ಲಿ ಪತ್ತೆಯಾದ ಕೂದಲು ಹಾಗೂ ರಕ್ತದ ಮಾದರಿಯ ಜೊತೆ ಮ್ಯಾಚ್ ಆಗುತ್ತದೆಯೇ ಎಂಬುದನ್ನು ಪರೀಕ್ಷಿಸಲಾಗುತ್ತಿದೆ. ಇನ್ನೂ ಇದೇ ವೇಳೆ ನಟ ದರ್ಶನ್ ಅವರು ತಲೆಗೆ ಹಾಕಿದ್ದ ವಿಗ್ ಅನ್ನು ಪೊಲೀಸರು ತೆಗೆಸಿದ್ದಾರೆ ಎನ್ನಲಾಗಿದೆ.
ಇಂದು ಎಲ್ಲಾ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಎ-೧ ಆರೋಪಿ ಪವಿತ್ರಾ ಗೌಡ, ಎ-೨ ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರೋಗ್ಯ ತಪಾಸಣೆಗೆ ಕರೆದುಕೊಂಡು ಹೋಗಲಾಗಿದೆ. ಈ ವೇಳೆ ಉಳಿದ ಆರೋಪಿಗಳಂತೆ ದರ್ಶನ್ ಕೂದಲಿನ ಮಾದರಿ ಸಂಗ್ರಹಿಸಲು ಪೊಲೀಸರು ದರ್ಶನ್ ಧರಿಸಿದ್ದ ವಿಗ್ ಅನ್ನು ತೆಗೆಸಿದ್ದಾರೆ ಎನ್ನಲಾಗುತ್ತಿದೆ.