ಕಾಂಗ್ರೆಸ್ ಶಾಸಕರು ತಮ್ಮ ಸರ್ಕಾರದ ಮೇಲೆ ಆತ್ಮವಿಶ್ವಾಸವನ್ನು ಕಳೆದುಕೊಂಡಿದ್ದು ಗ್ಯಾರಂಟಿ ಯೋಜನೆ ಯನ್ನು ಕೈಬಿಡಲು ಒತ್ತಾಯಿಸುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಖಜಾನೆ ಖಾಲಿಯಾಗಿದ್ದು ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚು ಸ್ಥಾನಗಳನ್ನು ಗೆದ್ದಿದ್ದು ಕಾಂಗ್ರೆಸ್ ಪಕ್ಷ ಸೋಲನ್ನು ಅನುಭವಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಅಭಿವೃದ್ದಿಯನ್ನು ಸಂಪೂರ್ಣವಾಗಿ ಕಡೆಗಣಿಸಿರುವುದರಿಂದ ರಾಜ್ಯದ ಜನತೆ ಹತಾಶರಾಗಿದ್ದಾರೆ.
ಕಾಂಗ್ರೆಸ್ ಸರ್ಕಾರದ ಶಾಸಕರು ತಮ್ಮ ಆತ್ಮವಿಶ್ವಾಸವನ್ನು ಕಳೆದುಕೊಂಡಿದ್ದು ಗ್ಯಾರಂಟಿ ಯೋಜನೆಯನ್ನು ಕೈಬಿಡಲು ಒತ್ತಾಯಿಸುತ್ತಿದ್ದಾರೆ ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಖಜಾನೆ ಕಾಲಿಯಾಗಿದ್ದು ಆರ್ಥಿಕವಾಗಿ ದಿವಾಳಿಯಾಗಿದೆ, ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ಸಂಪತ್ತಭರಿತವಾಗಿದೆ ಎಂದು ಹೇಳುತ್ತದೆ ಆದರೆ, ತೈಲ ಬೆಲೆಯನ್ನು ಏಕೆ ಏರಿಸುತ್ತಿದೆ ಎಂದು ಪ್ರಶ್ನಿಸಿದರು.