ಸಿಎಂ ಸಿದ್ದರಾಮಯ್ಯ ಅವರು ಬಳ್ಳಾರಿಯ ಸಂಡೂರಿನಲ್ಲಿ ಯೋಗಭ್ಯಾಸ ಮಾಡಿದ್ದಾರೆ.
ಇಂದು ಜೂ.21 ಅಂತಾರಾಷ್ಟ್ರೀಯ ಯೋಗ ದಿನಾಚರಣೆ. ಭಾರತದ ದೇಶದ ಅತ್ಯಂತ ಪುರಾತಾನ ಯೋಗಾಭ್ಯಾಸವನ್ನು 10 ವರ್ಷಗಳಿಂದೀಚೆಗೆ ಜಾಗತಿಕ ಮಟ್ಟದಲ್ಲಿ ಆಚರಣೆ ಮಾಡಲಾಗುತ್ತಿದೆ.
ಇಂದು ಸಿಎಂ ಸಿದ್ದರಾಮಯ್ಯ ಅವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ತೋರಣಗಲ್ ಜಿಂದಾಲ್ನ ಬಸವೇಶ್ವರ ನಗರದ ಆವರಣದಲ್ಲಿ ಮಾಡಿದರು
ಯೋಗ ದಿನಾಚರಣೆ ಪ್ರಯುಕ್ತ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಭಾರತವು ಜಗತ್ತಿಗೆ ಪರಿಚಯಿಸಿದ ಅನನ್ಯ ಸಾಧನ ಯೋಗ. ಯೋಗಾಭ್ಯಾಸ ಮಾಡುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿ ಸಾಧ್ಯ. ನಿತ್ಯ ಜೀವನಕ್ಕೆ ಬೇಕಿರುವ ಏಕಾಗ್ರತೆ, ಸಂಯಮ, ಒತ್ತಡ ನಿರ್ವಹಣೆಯ ಕೌಶಲ್ಯಗಳು ಯೋಗದಿಂದ ಲಭಿಸುತ್ತವೆ ಎಂದು ಬರೆದುಕೊಂಡಿದ್ದಾರೆ.
ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ, ಸಚಿವ ಸಂತೋಷ ಲಾಡ್, ಸಂಸದ ತುಕಾರಾಂ, ನಟಿ ಶ್ರೀಲೀಲಾ ಭಾಗಿಯಾಗಿದ್ದರು