ಬೆಂಗಳೂರು:- ಸೂರಜ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಜಿ ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸೂರಜ್ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ಸಂಬಂಧಪಟ್ಟಹಾಗೆ ಇನ್ನೂ ದೂರು ದಾಖಲಾಗಿಲ್ಲ.
ಈ ಕುರಿತು ಮಾಧ್ಯಮಗಳಲ್ಲಿ ನೋಡಿದ್ದೇನೆ ಎಂದರು.
ನಮಗೆ ಯಾರೂ ಅಧಿಕೃತ ದೂರು ನೀಡಿಲ್ಲ. ದೂರು ಬಂದ ಕೂಡಲೇ ನಾವು ಕ್ರಮ ತೆಗೆದುಕೊಳ್ಳುತ್ತೇವೆ. ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ ಎಂದು ವರದಿಗಳಲ್ಲಿ ಉಲ್ಲೇಖಿಸಲಾಗಿದೆ. ಆದರೆ ನನಗೆ ಯಾವುದೇ ಪತ್ರ ಬಂದಿಲ್ಲ. ಪ್ರಕರಣ ಏನು ಎಂಬುದಾಗಿ ತಿಳಿದುಕೊಂಡು ನಾವು ತನಿಖೆ ಮಾಡುತ್ತೇವೆ. ತನಿಖೆಯನ್ನು ಸಿಐಡಿಗೆ ಕೊಡುವ ಮುನ್ನ ನೈಜತೆ ತಿಳಿದುಕೊಳ್ಳುತ್ತೇವೆ. ಅಧಿಕೃತ ದೂರು ಬಂದ್ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು