ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ಪರಪ್ಪನ ಅಗ್ರಹಾರ ಸೇರಿದ್ದಾರೆ. ನಟ ದರ್ಶನ್ ಜೈಲು ಸೇರುವುದು ಇದೇ ಮೊದಲಲ್ಲ. ಈ ಹಿಂದೆಯೂ ಒಂದು ಬಾರಿ ದರ್ಶನ್ ಜೈಲು ಸೇರಿ ಹೊರ ಬಂದಿದ್ದರು.
ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಆರೋಪದಲ್ಲಿ 2011 ಸೆಪ್ಟೆಂಬರ್ 9 ರಂದು ದರ್ಶನ್ ಬಂಧಿತರಾಗಿದ್ದರು. ಈ ಪ್ರಕರಣದಲ್ಲಿ ಅಂದು ವಿಜಯನಗರ ಪೊಲೀಸರು ದರ್ಶನ್ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಸುಮಾರು ತಿಂಗಳ ಕಾಲ ಜೈಲುವಾಸ ಅನುಭವಿಸಿ 2011 ಅಕ್ಟೋಬರ್ ನಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಹೊರ ಬಂದಿದ್ದರು.
ಈಗ ಬರೋಬ್ಬರಿ 13 ವರ್ಷಗಳ ನಂತರ ಮತ್ತೆ ದರ್ಶನ್ ಸೆರೆಮನೆಗೆ ತೆರಳಿದ್ದಾರೆ. ಈ ಬಾರಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಈ ಮೂಲಕ ನಟ ದರ್ಶನ್ ತಮ್ಮ ಜೀವನದಲ್ಲಿ ಎರಡನೇ ಬಾರಿಗೆ ಜೈಲುವಾಸ ಅನುಭವಿಸುತ್ತಿದ್ದಾರೆ. ಈ ಮೂಲಕ ಹಣ ಬಲವಿದ್ದರೆ ಏನು ಬೇಕಾದರು ಮಾಡಬಹುದು ಎಂದುಕೊಂಡವರಿಗೆ ನ್ಯಾಯದ ಮುಂದೆ ಎಲ್ಲರು ಒಂದೇ ಸಮ ಅನ್ನೋದು ಗೊತ್ತಾಗಿದೆ.