ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಗೆ ಜೈಲೂಟ ತಿನ್ನಲಾಗದೆ ಪರದಾಟ ಅನುಭವಿಸಿದ್ದಾನೆ.
ಎ1 ಆರೋಪಿ ಪವಿತ್ರಾ ಗೌಡ (ಸಹ ಜೈಲಿನ ಆಹಾರ ಇಷ್ಟವಾಗದೆ ಒದ್ದಾಡುತ್ತಿದ್ದಾರೆ.
ಮೊದಲೇ ಫಿಟ್ನೆಸ್ ಮೇಂಟೇನ್ ಮಾಡಲು ಚಿಕನ್, ಮಟನ್, ಪ್ರೂಟ್ಸ್, ಜೂಸ್ ಸೇವಿಸುತ್ತಿದ್ದ ದರ್ಶನ್, ಜೈಲಿನಲ್ಲಿ ಸರಿಯಾಗಿ ಉಪ್ಪು ಕಾರ ಇಲ್ಲದ ಸಾಂಬಾರ್, ಮುದ್ದೆ ಅನ್ನ ತಿನ್ನಲು ಕಷ್ಟಪಡುತ್ತಿದ್ದಾನೆ. ರಾತ್ರಿ ಸಹ ಜೈಲಿನ ಮೇನು ಪ್ರಕಾರ ಮುದ್ದೆ, ಅನ್ನ, ಚಪಾತಿ ತರಕಾರಿ ಸಾಂಬಾರ್ ಮತ್ತು ಮಜ್ಜಿಗೆಯನ್ನು ಜೈಲು ಸಿಬ್ಬಂದಿ ನೀಡಿದ್ದಾರೆ. ಜೈಲೂಟ ತಿನ್ನಲಾಗದೆ ದರ್ಶನ್ ಪರದಾಟ ಅನುಭವಿಸಿದ್ದಾನೆ
ಸರಿಯಾಗಿ ಊಟ ಸೇರದೆ, ನಿದ್ದೆಯೂ ಬಾರದೆ ದರ್ಶನ್ ವಿಲವಿಲ ಒದ್ದಾಡಿದ್ದು ಕಂಡುಬಂತು. ರಾತ್ರಿ ಸಹ ತಡವಾಗಿ ನಿದ್ರೆಗೆ ಜಾರಿದ ದರ್ಶನ್ ಬೆಳಗ್ಗೆ 6 ಗಂಟೆ ಸುಮಾರಿಗೆ ಎಚ್ಚರಗೊಂಡಿದ್ದು, ಕಾಫಿ ಸೇವಿಸದೆ ಬಿಸಿ ನೀರು ಕೇಳಿ ಪಡೆದಿದ್ದಾನೆ. ಸಹಕೈದಿಗಳು ಮಾತನಾಡಲು ಯತ್ನಿಸಿದರೂ ಅಷ್ಟಾಗಿ ಅವರ ಜೊತೆ ಬೆರೆಯಲಿಲ್ಲ. ʼನಿಮ್ಮ ಸಹವಾಸ ಸಾಕಪ್ಪ. ದಯವಿಟ್ಟು ನನ್ನ ಪಾಡಿಗೆ ಬಿಟ್ಟು ಬಿಡಿʼ ಎಂದು ಕೊಠಡಿಯಲ್ಲಿ ಸುಮ್ಮನೆ ಕೂತಿದ್ದಾನೆ ಎಂದು ಗೊತ್ತಾಗಿದೆ
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ವಿಶೇಷ ಬ್ಯಾರಕ್ನಲ್ಲಿ ದರ್ಶನ್ ಇದ್ದಾನೆ. ಧನರಾಜ್, ವಿನಯ್, ಪ್ರದೂಶ್ ಜೊತೆ ಒಂದೇ ಕೊಠಡಿಯಲ್ಲಿಡಲಾಗಿದೆ. ಸೆರೆವಾಸದಲ್ಲಿ ನಟ ಚಡಪಡಿಸುತ್ತಿದ್ದು, ಮೌನಕ್ಕೆ ಜಾರಿದ್ದಾನೆ. ಸಹ ಬಂದಿಗಳ ಜೊತೆ ಭದ್ರತಾ ವಿಭಾಗದ ಬ್ಯಾರಕ್ನಲ್ಲಿ ಸೆರೆವಾಸದಲ್ಲಿಡಲಾಗಿದೆ. ಸೊಳ್ಳೆಕಾಟದಿಂದ ದರ್ಶನ್ ಹಾಗೂ ಪವಿತ್ರಾ ಇಬ್ಬರೂ ನಲುಗಿದ್ದಾರೆನಿನ್ನೆ ಭಾನುವಾರ ಆಗಿದ್ದರಿಂದ ಕುಟುಂಬಸ್ಥರು ಮತ್ತು ಆಪ್ತರ ಭೇಟಿಗೆ ಅವಕಾಶ ನೀಡಿಲ್ಲ. ಇಂದು ದರ್ಶನ್ ಮತ್ತು ಪವಿತ್ರಾ ಕುಟುಂಬಸ್ಥರು ಹಾಗೂ ಆಪ್ತರ ಭೇಟಿ ಸಾಧ್ಯತೆ ಇದೆ. ಪವಿತ್ರಾ ಗೌಡ ಕೂಡ ಜೈಲು ಮೆನುವಿನಂತೆ ಚಪಾತಿ, ಅನ್ನ, ಸಾಂಬಾರ್ ಮತ್ತು ಮಜ್ಜಿಗೆ ಸೇವನೆ ಮಾಡಿದ್ದು, ಸಹಖೈದಿಗಳ ಜೊತೆ ಬೆರೆಯದೆ ಬೇಸರದಲ್ಲಿಯೇ ದಿನ ಕಳೆಯುತ್ತಿದ್ದಾರೆ. ರಾತ್ರಿ ಬೇಗ ಮಲಗಿದರೂ ಪದೇ ಪದೆ