ಸಮರ್ಪಕ ನೀರಿನ ಪೂರೈಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿಗೆ ಉಪವಾಸ ಸತ್ಯಾಗ್ರಹ ಆರಂಭಿಸಿರುವ ಸಚಿವೆ ಅತಿಶಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಇಂದು ನಸುಕಿನ ಜಾವ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳವಾರ ಮುಂಜಾನೆ ಅತಿಶಿ ಅವರನ್ನು ರಾಷ್ಟ್ರ ರಾಜಧಾನಿಯ ಲೋಕನಾಯಕ ಜೈ ಪ್ರಕಾಶ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅತಿಶಿ ಅವರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಂಗಳವಾರ 5ನೇ ದಿನಕ್ಕೆ ಕಾಲಿಟ್ಟಿದೆ. ಹರಿಯಾಣ ದೆಹಲಿಯ ಪಾಲಿನ ನೀರನ್ನು ಬಿಡುಗಡೆ ಮಾಡುತ್ತಿಲ್ಲ ಎಂದು ಅವರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ವೈದರಸಲಹೆತಿರಸ್ಕಾರ
ಉಪವಾಸ ಸತ್ಯಾಗ್ರಹ ಹಿನ್ನೆಲೆಯಲ್ಲಿ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ವೈದ್ಯರು ಸಲಹೆ ನೀಡಿದ್ದರು. ಆದರೂ ವೈದ್ಯರ ಸಲಹೆ ತಿರಸ್ಕರಿಸಿದ ಸಚಿವೆ ಅತಿಶಿ ಆರೋಗ್ಯ ಹದಗೆಟ್ಟಿದ್ದರೂ,
ಹರಿಯಾಣವು ದೆಹಲಿಯ ನ್ಯಾಯಯುತವಾದ ನೀರನ್ನು) ಬಿಡುಗಡೆ ಮಾಡುವವರೆಗೆ ಅನಿರ್ದಿಷ್ಟ ಉಪವಾಸ ಮುಂದುವರೆಸುವುದಾಗಿ ಪ್ರತಿಜ್ಞೆ ಮಾಡಿದ್ದರು. ನನ್ನ ದೇಹವು ಎಷ್ಟೇ ನರಳಿದರೂ ಹರಿಯಾಣ ನೀರು ಬಿಡುವವರೆಗೆ ನಾನು ಉಪವಾಸ ಮುಂದುವರಿಸುತ್ತೇನೆ ಎಂದು ಅತಿಶಿ ಕಳೆದ ಒಂದು ದಿನದ ಹಿಂದೆಯಷ್ಟೇ ಕೂಗಿ ಹೇಳಿದ್ದರು.