ರಾಹುಲ್ ಗಾಂಧಿ ಅವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು. ಅವರು ಲೋಕಸಭಾ ವಿರೋಧ ಪಕ್ಷದ ಸ್ಥಾನವನ್ನು ಸ್ವೀಕರಿಸಬೇಕೆಂದು ನಾನು ಕೂಡ ಸಲಹೆ ನೀಡಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.
ಕಳೆದ ರಾತ್ರಿ ಕಾಂಗ್ರೆಸ್ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಇಂಡಿಯಾ ಮೈತ್ರಿ ಕೂಟ ನಾಯಕರ ಸಭೆಯ ನಂತರ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸುವ ನಿರ್ಧಾರವನ್ನು ಪ್ರಕಟಿಸಲಾಯಿತು.
ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ಲೋಕಸಭಾ ವಿರೋಧ ಪಕ್ಷದ ಸ್ಥಾನವನ್ನು ಸ್ವೀಕರಿಸಬೇಕೆಂದು ನಾನು ಕೂಡ ಸಲಹೆ ನೀಡಿದ್ದೆ. ಬಿಜೆಪಿಹಾಗೂ ನರೇಂದ್ರ ಮೋದಿಯವರನ್ನು ಎದುರಿಸಲು ರಾಹುಲ್ ಗಾಂಧಿ ಸೂಕ್ತ ವ್ಯಕ್ತಿ. ಅವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು. ರಾಹುಲ್ ಗಾಂಧಿಯವರು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಅಲಂಕರಿಸಿದ್ದಕ್ಕಾಗಿ ಅವರಿಗೆ ತುಂಬು ಹೃದಯದ