ಹಲವು ಜನರನ್ನು ಮದುವೆಯಾಗಿ ವಂಚಿಸಿದ್ದ ಮಹಿಳೆಗೆ ಎಚ್ಐವಿ ಧೃಢಪಟ್ಟಿದ್ದು, ಮಾಜಿ ವರಗಳಿಗಾಗಿ ಶೋಧ ಕಾರ್ಯ ನಡೆದಿದೆ. ಉತ್ತರಾಖಂಡದಲ್ಲಿ ಈ ಘಟನೆ ಜರುಗಿದೆ.
ಅರೇಂಜ್ ಮ್ಯಾರೇಜ್ ಹೆಸರಿನಲ್ಲಿ ಮಹಿಳೆಯು ಹಲವರಿಗೆ ವಂಚಿಸಿದ್ದಳು.
ತಾನು ಸೇರಿ ಏಳು ಜನರ ಗ್ಯಾಂಗ್ ಕಟ್ಟಿದ್ದ ಮಹಿಳೆಯು, ವಯಸ್ಸಾದರೂ ಮದುವೆಯಾಗದವರು, ಕಂಕಣ ಭಾಗ್ಯ ಕೂಡಿ ಬರದವರು, ಹೆಂಡತಿ ತೀರಿಕೊಂಡ ಬಳಿಕ ಒಂಟಿಯಾದವರನ್ನು ಗುರುತಿಸಿ, ಅವರನ್ನು ಮದುವೆಯಾಗುತ್ತಿದ್ದಳು. ಮದುವೆಯಾದ ಬಳಿಕ ಗ್ಯಾಂಗ್ನ ಸದಸ್ಯರನ್ನು ತನ್ನ ಸಂಬಂಧಿಕರು ಎಂದು ನೂತನ ವರಗಳಿಗೆ ಪರಿಚಯ ಮಾಡಿಸುತ್ತಿದ್ದಳು. ಇದಾದ ಬಳಿಕ, ಆ ವ್ಯಕ್ತಿಯ ಬಳಿಯ ನಗದು, ಚಿನ್ನಾಭರಣಗಳನ್ನು ಕದ್ದು ಪರಾರಿಯಾಗುತ್ತಿದ್ದಳು.
ಹೀಗೆ, ಉತ್ತರ ಪ್ರದೇಶ, ಉತ್ತರಾಖಂಡದಲ್ಲಿ ಹಲವರಿಗೆ ಮೋಸ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಹಿಳೆ ಹಾಗೂ ಆರು ಆರೋಪಿಗಳನ್ನು ಬಂಧಿಸಿದ್ದರು. ಮಹಿಳೆಯ ಸೇರಿ ಏಳು ಜನರನ್ನು ಮುಜಫ್ಫರ್ನಗರ ಜೈಲಿನಲ್ಲಿ ಇರಿಸಲಾಗಿದೆ. ಇತ್ತೀಚೆಗೆ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಜಿಲ್ಲಾಸ್ಪತ್ರೆಯ ವೈದ್ಯರು ನೀಡಿದ ವರದಿಯಲ್ಲಿ, ಮಹಿಳೆಗೆ ಏಡ್ಸ್ ಇರುವುದು ಪತ್ತೆಯಾಗಿದೆ. ಇದು ಈಗ ಭೀಕರ ಪ್ರಮಾಣದಲ್ಲಿ ಆರೋಗ್ಯ ಸಮಸ್ಯೆಯನ್ನು ತಂದೊಡ್ಡಿದೆ
ಮಹಿಳೆಯು ಹಲವು ಜನರಿಗೆ ವಂಚಿಸಿದ್ದು, ಹತ್ತಾರು ಜನರು ಈಕೆಯ ಜತೆ ದೈಹಿಕ ಸಂಪರ್ಕಕ್ಕೆ ಬಂದಿದ್ದಾರೆ. ಈಗ ಮಹಿಳೆಗೆ ಎಚ್ಐವಿ ಇದೆ ಎಂಬುದು ಇತ್ತೀಚಿನ ವೈದ್ಯಕೀಯ ವರದಿಯಿಂದ ತಿಳಿದುಬಂದಿದೆ. ಈಕೆಯ ಜತೆ ಲೈಂಗಿಕ ಸಂಪರ್ಕ ಹೊಂದಿದವರು,