ಕರ್ನಾಟಕದ ಹಲವೆಡೆ ಜೂನ್ 30ರವರೆಗೆ ಎಡೆಬಿಡದೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ
ನಗರದಲ್ಲಿ ಎಲ್ಲೆಡೆ ಮೋಡ ಕವಿದ ವಾತಾವರಣ ಇದೆ. ಇದೇ ರೀತಿ ಮುಂದಿನ ಎರಡು ದಿನಗಳ ಕಾಲ ವಾತಾವರಣ ಇರುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆಯ ತಜ್ಞರು ಮಾಹಿತಿ ನೀಡಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಮಂಡ್ಯ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ಗದಗ, ಬೀದರ್, ರಾಯಚೂರು, ಬಳ್ಳಾರಿ, ಯಾದಗಿರಿ, ರಾಜ್ಯದ ಎಲ್ಲಾ ಭಾಗಗಳಲ್ಲೂ ಭಾರಿ ಮಳೆ ಅಲರ್ಟ್ ನೀಡಲಾಗಿದ್ದು, ಇಂದು ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡು ಪ್ರದೇಶಗಳಿಗೆ ರಾಜ್ಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಇನ್ನು ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಾಗಿ ಮುಂಗಾರು ಮಳೆ ಸುರಿದಿದ್ದು, ಜೂನ್ 1 ರಿಂದ 26 ಅಂದರೆ ಇಂದಿನವರೆಗೆ ರಾಜ್ಯದಲ್ಲಿ ಅಬ್ಬರದ ಮಳೆಯಿಂದಾಗಿ 2023ಕ್ಕೆ ಹೋಲಿಸಿದರೆ ಈ ಬಾರಿ 3% ನಷ್ಟು ಮುಂಗಾರು ಮಳೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 115 mm ನಷ್ಟು ಪ್ರಮಾಣದಲ್ಲಿ ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.