ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಜುಲೈ4ರ ವರೆಗೂ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಇಷ್ಟಾದರೂ ದರ್ಶನ್ಗೆ ಕೆಲವು ಅಭಿಮಾನಿಗಳು ಹಾಗೂ ನಟ ನಟಿಯರು ಬೆಂಬಲ ನೀಡಿದ್ದಾರೆ. ದಿನ ಕಳೆದಂತೆ ತನಿಖೆಯಿಂದ ಬೆಚ್ಚಿ ಬೀಳಿಸುವ ಸತ್ಯಗಳು ಹೊರಬೀಳುತ್ತಿವೆ. ಕಲೆವರು ಅಂದಿನಿಂದ ದರ್ಶನ್ಗೆ ಜೀವಾವಧಿ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಈ ಸಾರ್ವಜನಿಕ ಆಕ್ರೋಶದ ನಡುವೆ, ಟಾಲಿವುಡ್ ಹೀರೊ ನಾಗ ಶೌರ್ಯ ದರ್ಶನ್ಗೆ ಬೆಂಬಲ ನೀಡಿದ್ದಾರೆ. ʻದರ್ಶನ್ ಅಣ್ಣ ತಮ್ಮ ಕೆಟ್ಟ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ. ನಾನು ಈ ಸುದ್ದಿಯನ್ನು ಒಪ್ಪಿಕೊಳ್ಳಲಾರೆʼʼಎಂದು ಬರೆದುಕೊಂಡಿದ್ದಾರೆ.
ಘಟನೆ ಬಗ್ಗೆ ಕೇಳಿದಾಗ ಮೃತರ ಕುಟುಂಬಕ್ಕೆ ನನ್ನ ಹೃದಯ ಮರಗುತ್ತದೆ. ಈ ಕಷ್ಟದ ಸಮಯದಲ್ಲಿ ಅವರಿಗೆ ಶಕ್ತಿಯನ್ನು ನೀಡಬೇಕೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಈ ವಿಷಯದಲ್ಲಿ ಜನರು ಈಗಾಗಲೇ ತೀರ್ಮಾನಗಳಿಗೆ ಬರುತ್ತಿರುವುದನ್ನು ನೋಡುವುದು ಕಷ್ಟವಾಗುತ್ತದೆ. ದರ್ಶನ್ ಅಣ್ಣ ತಮ್ಮ ಕೆಟ್ಟ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ. ದರ್ಶನ್ ಅವರ ಉದಾರತೆ, ಸಹೃದಯ ಸ್ವಭಾವ ಮತ್ತು ಇತರರಿಗೆ ಸಹಾಯ ಮಾಡುವ ಬದ್ಧತೆಯನ್ನು ಅವರನ್ನು ಚೆನ್ನಾಗಿ ಬಲ್ಲವರು ತಿಳಿದುಕೊಂಡಿದ್ದಾರೆ. ಅನೇಕರಿಗೆ ಶಕ್ತಿಯ ಆಧಾರಸ್ತಂಭವಾಗಿದ್ದಾರೆʼʼಎಂದು ಬರೆದುಕೊಂಡಿದ್ದಾರೆ.
ನಮ್ಮ ನ್ಯಾಯಾಂಗ ವ್ಯವಸ್ಥೆಯಲ್ಲಿ ನನಗೆ ನಂಬಿಕೆ ಇದೆ. ಸತ್ಯವು ಶೀಘ್ರದಲ್ಲೇ ಹೊರಬರುತ್ತದೆ. ಇನ್ನೊಂದು ಕುಟುಂಬವು ಸಹ ಬಹಳವಾಗಿ ನರಳುತ್ತಿದೆ ಎಂಬುದನ್ನು ನಾವು ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಸಹಾನುಭೂತಿಗೆ ಹೆಸರುವಾಸಿಯಾದ ಅಣ್ಣ ಅವರು ನಿರಪರಾಧಿ ಎಂಬುದು ಸಾಬೀತಾಗುತ್ತದೆ. ನಿಜವಾದ ಅಪರಾಧಿ ಯಾರೆಂಬುದು ಗೊತ್ತಾಗುತ್ತದೆ’ ಎಂದಿದ್ದಾರೆ.
ದರ್ಶನ್ ಅವರನ್ನು ಬೆಂಬಲಿಸುವ ನಾಗಶೌರ್ಯ ನಿರ್ಧಾರವು ಮೂರ್ಖತನ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ. ಒಬ್ಬ ಕೊಲೆಗಾರನನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ನೆಟ್ಟಿಗರು ನಾಗ ಶೌರ್ಯ ಬಗ್ಗೆ ಆಕ್ರೋಶ ಹೊರಹಾಕುತ್ತಿದ್ದಾರೆ.
ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ದರ್ಶನ್ ಎಂಡ್ ಗ್ಯಾಂಗ್ ಕಿಡ್ನ್ಯಾಪ್ ಮಾಡಿ ಹತ್ಯೆ ಮಾಡಿತ್ತು. ಸದ್ಯ ಘಟನೆಯಲ್ಲಿ 17 ಮಂದಿ ಆರೋಪಿಗಳನ್ನು ಬಂಧಿಸಿದ್ದು ಪೊಲೀಸರು ಸಾಕಷ್ಟು ಸಾಕ್ಷಗಳನ್ನು ಕಲೆ ಹಾಕಿದ್ದಾರೆ.