ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರಲ್ಲಿ ಛಾವಣಿ ಕುಸಿದು 6 ಮಂದಿ ಗಾಯಗೊಂಡ ಘಟನೆ ನಡೆದಿದೆ. ಇಂದು ಮುಂಜಾನೆ 5.30ಕ್ಕೆ ಈ ಅವಘಡ ಸಂಭವಿಸಿದೆ.
ಭಾರೀ ಮಳೆಯ ಪರಿಣಾಮ ಈ ದುರಂತ ನಡೆದಿದೆ ಎಂದು ಹೇಳಲಾಗುತ್ತಿದೆ.ಘಟನೆ ನಡೆದ ಕೂಡಲೇ ಮೂರು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಯಿತು. ಘಟನೆಯಲ್ಲಿ 6 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ದಳದ ಅಧಿಕಾರಿ ತಿಳಿಸಿದ್ದಾರೆ.
ಸದ್ಯ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಛಾವಣಿ ಕುಸಿತದಿಂದ ಟ್ಯಾಕ್ಸಿ ಸೇರಿದಂತೆ ಹಲವು ವಾಹನಗಳು ಜಖಂ ಆಗಿವೆ. ಘಟನೆಯ ಪರಿಣಾಮ ಟರ್ಮಿನಲ್ 1 ರಿಂದ ಎಲ್ಲಾ ನಿರ್ಗಮನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸುರಕ್ಷತಾ ಕ್ರಮವಾಗಿ ಚೆಕ್-ಇನ್ ಕೌಂಟರ್ಗಳನ್ನು ಮುಚ್ಚಲಾಗಿದೆ