ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಕಳೆದ ಬಾರಿ ಒಂದು ಸ್ಥಾನ ಗೆದ್ದಿದ್ದ ಕಾಂಗ್ರೆಸ್ ಪಕ್ಷ ಈ ಬಾರಿ 9 ಸ್ಥಾನವನ್ನು ಗೆಲುವು ಮೂಲಕ ಹೆಚ್ಚು ಸ್ಥಾನವನ್ನು ಗೆದ್ದಿದ್ದೇವೆ ಇದಕ್ಕೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಕಾರಣ ಆದರೆ ನಾವು ಲೆಕ್ಕ ಹಾಕಿಕೊಂಡಿದ್ದ ತಾನ ನಮಗೆ ಸಿಗಲಿಲ್ಲ ಆದರೂ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ವರುಣ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷರಾದ ಡಾ.
ಯತಿಂದ್ರ ಸಿದ್ರಾಮಯ್ಯನವರು ಸ್ಪಷ್ಟಪಡಿಸಿದರು
ಡಾ. ಯತಿಂದ್ರ ಸಿದ್ರಾಮಯ್ಯನವರು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡುತ್ತಾ ವಿಧಾನಸಭಾ ಚುನಾವಣೆಯಲ್ಲಿ ವರುಣ ಕ್ಷೇತ್ರವನ್ನು ನಮ್ಮ ತಂದೆ ಸಿದ್ದರಾಮಯ್ಯನವರಿಗೆ ಬಿಟ್ಟುಕೊಟ್ಟ ಎಂದರೆಯಲ್ಲಿ ನನಗೆ ವಿಧಾನಸಭೆಯಿಂದ ವಿಧಾನಪ್ರಶಸ್ತಿಗೆ ಸದಸ್ಯರಾಗಿ ಆಯ್ಕೆ ಮಾಡಿದ್ದಾರೆ.
ಅದರಿಂದ ಪಕ್ಷದ ಎಲ್ಲ ಹಿರಿಯರಿಗೂ ಶಾಸಕರಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೂ ಹಾಗೂ ಪಕ್ಷದ ಹಿರಿಯ ಮುಖಂಡರಿಗೂ ನಾನು ಆಭಾರಿಯಾಗಿದ್ದೇನೆ ಎಂದು ಡಾ. ಯತೀಂದ್ರ ಸಿದ್ದರಾಮಯ್ಯನವರು ತಿಳಿಸಿದರು ಅಲ್ಲದೆ ಪಕ್ಷದ ವರಿಷ್ಠರು ನನಗೆ ಯಾವುದೇ ಜವಾಬ್ದಾರಿ ಕೊಟ್ಟರೂ ಸಹ ಆ ಜವಾಬ್ದಾರಿಯನ್ನು ನಿಭಾಯಿಸುವ ಮೂಲಕ ಪಕ್ಷದ ಬಲವರ್ಧನೆಗೆ ಹೆಚ್ಚು ಶ್ರಮವಜತೇನೆ ಎಂದರು.