ಮೈಸೂರು: ಸಾಲ ಬಾಧೆಗೆ ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದಲ್ಲಿ ನಡೆದಿದೆ. ಯತೀಕ್ (25) ಮೃತ ಯುವಕನಾಗಿದ್ದು, ಕೆ ಆರ್ ತಾಲ್ಲೂಕಿನ ಹೆಬ್ಬಾಳು ಕೊಪ್ಪಲು ಗ್ರಾಮದ ನಿವಾಸಿಯಾದ ಯತೀಕ್ ಮನೆಯಲ್ಲಿ ಸಮಸ್ಯೆ ಹಿನ್ನೆಲೆ ಕ್ರೆಡಿಟ್ ಕಾರ್ಡ್, ಪರ್ಸನಲ್ ಸಾಲ ಪಡೆದಿದ್ದನು.
ಬೆಂಗಳೂರಿನಲ್ಲಿ ಝೊಮೊಟೋ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಯುವಕ,
ಶೇರ್ ಮಾರ್ಕೆಟ್ ನಲ್ಲೂ ಹಣ ಹೂಡಿಕೆ ಮಾಡಿದ್ದನು. ಮಾಡಿದ್ದ ಸಾಲಕ್ಕೆ ಇಎಂಐ ಕಟ್ಟಲು ಸಾಧ್ಯವಾಗದ ಹಿನ್ನೆಲೆ ನನ್ನ ಸಾವಿಗೆ ಕಾರಣರಾದವರಿಗೆ ಶಿಕ್ಷೆ ನೀಡುವಂತೆ ಡೆತ್ ನೋಟ್ ನಲ್ಲಿ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಗನ ಸಾವಿಗೆ ನ್ಯಾಯ ಕೊಡಿಸುವಂತೆ ತಂದೆ ಎಚ್ ಟಿ ರಮೇಶ್ ಪೊಲೀಸ್ ಠಾಣೆಗೆ ದೂರು ಸಲ್ಲಿಕೆ ಮಾಡಿದ್ದು, ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.