ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಾನೆ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ದರ್ಶನ್ ಎಂಡ್ ಗ್ಯಾಂಗ್ ಕಿಡ್ನ್ಯಾಪ್ ಮಾಡಿ ಭೀಕರವಾಗಿ ಹತ್ಯೆ ಮಾಡಿತ್ತು. ಸದ್ಯ ಘಟನೆ ಸಂಬಂಧ ನಟ ದರ್ಶನ್ ಜೈಲು ಸೇರಿದ್ದು ಇದರಿಂದ ಇಡೀ ಚಿತ್ರರಂಗ ಆಘಾತಕ್ಕೆ ಒಳಗಾಗಿದೆ. ಈ ಬಗ್ಗೆ ಸ್ಯಾಂಡಲ್ ವುಡ್ ನಟಿ ಅದ್ವಿತಿ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ.
ಈ ಘಟನೆ ಬೇಸರ ತಂದಿದೆ. ಯಾರು ಯಾರಿಗೂ ಕೆಟ್ಟ ಕಾಮೆಂಟ್ ಮಾಡಬೇಡಿ. ಕೆಟ್ಟ ಕಾಮೆಂಟ್ ಮಾಡೋರನ್ನ ಬ್ಲಾಕ್ ಮಾಡಿಬಿಡಿ ಅಷ್ಟೇ. ಮೃತ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದಿದ್ದಾರೆ.
ದರ್ಶನ್ ಸರ್ ನಮ್ ಫ್ಯಾಶನ್ ಶೋ ಕಾರ್ಯಕ್ರಮಕ್ಕೆ ಬಂದಿದ್ರು. ಅವತ್ತು ಸಿಕ್ಕಾಗ ಚೆನ್ನಾಗಿ ಮಾತಾಡಿಸಿದ್ರು. ಮತ್ತೆ ಯಾವತ್ತೂ ಮುಖಾಮುಖಿ ಆಗಿಲ್ಲ. ಈ ಕೇಸ್ ನಲ್ಲಿ ದರ್ಶನ್ ಸರ್ ನಿರಾಪರಾಧಿ ಎಂದು ಆಚೆ ಬರಲಿ ಅಂತ ಕೇಳಿಕೊಳ್ಳುತ್ತೇನೆ ಎಂದರು.