ಕಳೆದ ಮೂರು ವಾರಗಳ ಹಿಂದೆಯಷ್ಟೇ ರಿಯಾಸಿ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಅನೇಕ ಕಡೆದ ದಾಳಿ ನಡೆಸಿದೆ. ಇದೇ ತಿಂಗಳ ಜೂನ್ 9ರಂದು ರಿಯಾಸಿ ಜಿಲ್ಲೆಯ ಪೌನಿ ಪ್ರದೇಶದಲ್ಲಿ ಭಯೋತ್ಪಾದಕರು ಶಿವ ಖೋರಿ ಗುಹಾಂತರ ದೇವಾಲಯಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಗುಂಡಿನ ದಾಳಿ ನಡೆಸಿದ್ದರು.
ಪರಿಣಾಮ ಬಸ್ ಕಮರಿಗೆ ಬಿದ್ದು, 10 ಮಂದಿ ಸಾವನ್ನಪ್ಪಿದ್ದರು 33 ಮಂದಿ ಗಾಯಗೊಂಡಿದ್ದರು.
ಆದ್ರೆ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ಎನ್ಐಎ ಜೂನ್ 15ರಂದು ಪ್ರಕರಣ ಕೈಗೆತ್ತಿಕೊಂಡಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ ಭಾನುವಾರ ಹಲವೆಡೆ ದಾಳಿ ನಡೆಸಿದೆ. ರಿಯಾಸಿ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಜೂನ್ 19 ರಂದು ಬಂಧಿಸಲಾದ ಶಂಕಿತ ಉಗ್ರ ಹಕಮ್ ಖಾನ್ ಅಕಾ ಹಕಿನ್ ದಿನ್ ನೀಡಿದ ಸುಳಿವು ಆಧರಿಸಿ ರಾಜೌರಿಯಲ್ಲಿ ದಾಳಿ ನಡೆಸಲಾಗಿದೆ ಉನ್ನತ ಮೂಲಗಳು ತಿಳಿಸಿವೆ.