ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಇರಬೇಕು. ಸಮಾಜಮುಖಿ ಕೆಲಸ ಮಾಡುವವರನ್ನು ಪ್ರೋತ್ಸಾಹಿಸಿ ಅವರೊಂದಿಗೆ ಕೈ ಜೋಡಿಸಿ ಎಂದರು. ರೈತರು ಬೆಳೆದ ಬೆಳೆ ಮಾರಾಟ ಮಾಡಲು ಸ್ಥಳ ಬೇಕಿತ್ತು, ಬೆಂಗಳೂರಿನಲ್ಲಿ ಸ್ಥಳ ಮಾಡಿಕೊಟ್ಟ ವ್ಯಾಪರಕ್ಕೆ ಉತ್ತಮ ಪೇಟೆಗಳನ್ನು ನಿರ್ಮಾಣ ಮಾಡಿಕೊಟ್ಟವರು ನಾಡಪ್ರಭು ಕೆಂಪೇಗೌಡರು ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್ ಅವರು ತಿಳಿಸಿದರು.
ಸಮುದ್ರಕ್ಕಿಂತ 3500 ಅಡಿ ಎತ್ತರದಲ್ಲಿದ್ದ ಬೆಂಗಳೂರನ್ನು ರಾಜಧಾನಿಯಾಗಿ ಆಯ್ಕೆ ಮಾಡಿ ಹಲವಾರು ಸೌಲಭ್ಯಗಳನ್ಜು ಒದಗಿಸಿ ಲಕ್ಷಾಂತರ ಜನರು ಜೀವನ ನಡೆಸುವ ರೀತಿಸುಂದರವಾಗಿ ನಿರ್ಮಾಣ ಮಾಡಿದ ಹೆಗ್ಗಳಿಕೆ ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ ಎಂದರುಪಾಕ್೯ಗಳ ಅಭಿವೃದ್ಧಿಗಾಗಿ ರೂ 2 ಕೋಟಿ ಬಿಡುಗಡೆಯಾಗಿದ್ದು, ರೈಲ್ವೆ ನಿಲ್ದಾಣದ ಹತ್ತಿರ ಇರುವ ಕೆಂಪೇಗೌಡ ಪಾಕ್೯ನ್ನು ಅಭಿವೃದ್ಧಿ ಪಡಿಸಿ ಮುಂದಿನ ವರ್ಷದೊಳಗೆ ಉದ್ಘಾಟನೆಗೆ ಸಿದ್ಧಪಡಿಸಲಾಗುವುದು ಎಂದರು. ಸಕ್ಕರೆ ಕಾರ್ಖಾನೆಗೆ ಹಿಂದಿನ ವರ್ಷ 50 ಕೋಟಿ ರೂ ಅನುದಾನವನ್ನು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಸರ್ಕಾರಕ್ಕೆ ಮನವಿ ಸಲ್ಲಿಸಿ, ಕಾರ್ಖಾನೆಗೆ ಒದಗಿಸಿ ಅಭಿವೃದ್ಧಿಪಡಿಸಿದ್ದಾರೆ. ಈ ವರ್ಷ ಕಾರ್ಖಾನೆ ಉತ್ತಮವಾಗಿ
ನಡೆಯುತ್ತದೆ ಎಂದರು.
ಸರ್ಕಾರ ಬೆಂಗಳೂರಿನ ಹತ್ತಿರ ಇನ್ನೊಂದು ವಿಮಾನ ನಿಲ್ದಾಣ ನಿರ್ಮಿಸಲು ಚಿಂತಿಸುತ್ತಿದ್ದು, ಮಂಡ್ಯ ಅಥವಾ ಮದ್ದೂರು ಭಾಗದಲ್ಲಿ ಉತ್ತಮ ಸ್ಥಳವನ್ನು ಗುರುತಿಸಿ ನೀಡಲು ಸಿದ್ಧವಿದ್ದೇವೆ. ಈ ಬಗ್ಗೆ ಕೇಂದ್ರ ಸಚಿವರೊಂದಿಗೂ ಚರ್ಚಿಸಲಾಗುವುದು ಎಂದರು.