ಸ್ಯಾಂಡಲ್ ವುಡ್ ಸ್ಟಾರ್ ಜೋಡಿ ಭುವನ್ ಹಾಗೂ ಹರ್ಷಿಕಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಕಳೆದ ವರ್ಷ ಆಗಸ್ಟ್ನಲ್ಲಿ ವಿವಾಹವಾಗಿದ್ದ ಜೋಡಿಗಳು ವರ್ಷ ತುಂಬುವುದರೊಳಗೆ ಸಿಹಿ ಸುದ್ದಿ ನೀಡಿದ್ದಾರೆ. ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೋಷಕರಾಗುತ್ತಿದ್ದು ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ.
ಅಕ್ಟೋಬರ್ನಲ್ಲಿ ಭುವನ್ ಹಾಗೂ ಹರ್ಷಿಕಾ ಮನೆಗೆ ಹೊಸ ಅಥಿತಿ ಆಗಮನವಾಗಲಿದೆ. ತಾಯಿಯಾಗುತ್ತಿರುವ ಸಂಭ್ರಮವನ್ನು ನಟಿ ಹರ್ಷಿಕಾ ವಿಭಿನ್ನವಾಗಿ ಫೋಟೋಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ. ಹರ್ಷಿಕಾ, ಭುವನ್ ಹಾಗೂ ಅವರ ಕುಟುಂಬದವರು ಕೊಡವ ಶೈಲಿಯ ಉಡುಗೆ ತೊಟ್ಟು ಫೋಟೊಶೂಟ್ ನಲ್ಲಿ ಮಿಂಚಿದ್ದಾರೆ.
ಅನೇಕ ವರ್ಷಗಳಿಂದ ಸ್ನೇಹಿತರಾಗಿದ್ದ ಹರ್ಷಿಕಾ ಮತ್ತು ಭುವನ್ ಪೊನ್ನಣ್ಣ ಬಳಿಕ ಮನೆಯವರ ಒಪ್ಪಿಗೆ ಮೇರೆಗೆ ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಕೊಡವ ಸಂಪ್ರದಾಯದಂತೆ ವಿರಾಜಪೇಟೆಯ ಅಮ್ಮತ್ತಿಯಲ್ಲಿ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದೀದ ಮೊದಲ ಮಗುವಿನ ಆಗಮನಕ್ಕಾಗಿ ದಂಪತಿ ಎದುರು ನೋಡುತ್ತಿದ್ದಾರೆ.
ತಾವು ಪೋಷಕರಾಗುತ್ತಿರೋ ವಿಚಾರ ಭುವನ್ ಮತ್ತು ಹರ್ಷಿಕಾ ತಮ್ಮ ಸಾಮಾಜಿಕಾ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ. ಸದ್ಯ ಹರ್ಷಿಕಾ ಐದು ತಿಂಗಳ ಗರ್ಭಿಣಿ ಆಗಿದ್ದು, ಕುಟುಂಬದೊಟ್ಟಿಗೆ ಸೇರಿ ಭಿನ್ನ ರೀತಿಯ ಫೋಟೊಶೂಟ್ ಮಾಡಿಸಿ ಖುಷಿಪಟ್ಟಿದ್ದಾರೆ.