ಬೆಂಗಳೂರು: ಕರ್ನಾಟಕ ವಿಧಾನಮಂಡಲ ಅಧಿವೇಶನಕ್ಕೆ (ಮುಂಗಾರು ಅಧಿವೇಶನ) ಮುಹೂರ್ತ ಫಿಕ್ಸ್ ಆಗಿದೆ, ಅಧಿವೇಶನದ ದಿನಾಂಕ ನಿಗದಿಗೆ ಕಳೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರ ವಿವೇಚನೆಗೆ ಬಿಡಲಾಗಿತ್ತು. ಅದರಂತೆ ಸಿದ್ದರಾಮಯ್ಯ ಅಧಿವೇಶನದ ದಿನಾಂಕ ಅಂತಿಮಗೊಳಿಸಿದ್ದು, ಈ ಕುರಿತು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿದೆ
ಜುಲೈ 15ರಿಂದ 26ರವರೆಗೆ ಹತ್ತು ದಿನಗಳ ಕಾಲ ಅಧಿವೇಶನ ಕರೆಯಲು ರಾಜ್ಯಪಾಲರಿಗೆ ಸಿಎಂ ಸಿದ್ದರಾಮಯ್ಯ ಅವರು ಶಿಫಾರಸು ಮಾಡಿದ್ದಾರೆ.
ಕಳೆದ ಕ್ಯಾಬಿನೆಟ್ ಸಭೆಯಲ್ಲಿ ಅಧಿವೇಶನದ ದಿನಾಂಕ ಅಂತಿಮಗೊಳಿಸಲು ಸಿಎಂ ವಿವೇಚನೆಗೆ ಬಿಡಲಾಗಿತ್ತು. ಅದರಂತೆ ಅಧಿವೇಶನದ ದಿನಾಂಕವನ್ನು ಸಿಎಂ ಸಿದ್ದರಾಮಯ್ಯ ಅಂತಿಮಗೊಳಿಸಿದ್ದಾರೆ.
ಇನ್ನು ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಆಡಳಿತದಲ್ಲಿನ ಲೋಪ ಎತ್ತಿ ಸರ್ಕಾರ ಮೇಲೆ ಮುಗಿಬೀಳಲು ಸಜ್ಜಾಗಿವೆ. ಅದರಲ್ಲೂ ಮುಖ್ಯವಾಗಿ ಬೆಲೆ ಏರಿಕೆ ವಿರುದ್ಧ ಹೋರಾಟ ಮಾಡಲಿವೆ
ಲೋಕಸಭೆ ಚುನಾವಣೆಗೂ ಮುನ್ನ ಫೆಬ್ರವರಿಯಲ್ಲಿ 15 ದಿನಗಳ ಅವಧಿಗೆ ಹಿಂದಿನ ಅಧಿವೇಶನ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡಿಸಿದ್ದರು.
ಜೂನ್ 20 ರಂದು ರಾಜ್ಯ ಸಚಿವ ಸಂಪುಟದಲ್ಲಿ ಕೈಗೊಂಡ ನಿರ್ಧಾರದ ಮೇರೆಗೆ ಜುಲೈ 15 ರಿಂದ ಜುಲೈ 26 ರವರೆಗೆ ಮುಂಗಾರು ಅಧಿವೇಶನ ಕರೆಯಲು ಸರ್ಕಾರವು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರಿಗೆ ಶಿಫಾರಸು ಮಾಡಿದೆ ಎಂದು ಅವರು ಹೇಳಿದರು