ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಸದ್ಯ ಸಿನಿಮಾ ರಂಗದಿಂದ ದೂರವಿದ್ದು ಮಗುವಿನ ಆರೈಕೆಯನಲ್ಲಿ ತೊಡಗಿಕೊಂಡಿದ್ದಾರೆ. ಮಗುವಿನ ಪಾಲನೆ ಪೋಷನೆಯಲ್ಲಿ ಬ್ಯುಸಿಯಾಗಿರುವ ಸಂಜನಾ ಗಲ್ರಾನಿ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಸಂಜನಾಗೆ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಆರೋಪ ಕೇಳಿ ಬಂದಿದ್ದು ಈ ಬಗ್ಗೆ ಸಂಜನ ಎಫ್ ಐ ಆರ್ ದಾಖಲಿಸಿದ್ದಾರೆ.
ಕಾರು ಪಾರ್ಕಿಂಗ್ ವಿಚಾರವಾಗಿ ಸ್ಥಳೀಯ ನಿವಾಸಿಗಳ ಜೊತೆ ಗಲಾಟೆ ನಡೆದಿದ್ದು, ಕೊಲೆ ಮಾಡ್ತಿನಿ ಅಂತ ಬೆದರಿಕೆ ಹಾಕಿದ್ದಾರೆ ಎಂದು ಸಂಜನಾ ಇಂದಿರಾನಗರ ಠಾಣೆಗೆ ದೂರು ನೀಡಿದ್ದಾರೆ. ಇಂದಿರಾನಗರದ ಧೂಪನಹಳ್ಳಿಯಲ್ಲಿ ವಾಸವಾಗಿರುವ ಸಂಜನಾ ಗಲ್ರಾನಿ ಮನೆ ಬಳಿ ಯಶೋಧಮ್ಮ ಹಾಗೂ ರಾಜಣ್ಣ ಎಂಬುವವರ ಮನೆಯೂ ಇದ್ದು, ಇವರ ಮೇಲೆಯೇ ಸಂಜನಾ ದೂರು ನೀಡಿದ್ದಾರೆ.
ಯಶೋಧಮ್ಮ ಹಾಗೂ ರಾಜಣ್ಣ ಎನ್ನುವವರು ರಸ್ತೆಗೆ ಅಡ್ಡಲಾಗಿ ಕಾರುಗಳನ್ನ ನಿಲ್ಲಿಸುತ್ತಾರೆ. ಇದನ್ನ ಪ್ರಶ್ನೆ ಮಾಡಿದ್ರೆ ಕೊಲೆ ಮಾಡ್ತಿನಿ, ನಾವು ನಲವತ್ತು ವರ್ಷದಿಂದ ಇಲ್ಲೇ ವಾಸ ಇದ್ದೀವಿ ಅಂತ ಆವಾಜ್ ಹಾಕಿದ್ದಲ್ಲದೆ, ವೇಶ್ಯೆ ಎಂದು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಸಂಜನಾ ಗಲ್ರಾಣಿ ಆರೋಪ ಮಾಡಿದ್ದಾರೆ. ಸದ್ಯ ಈ ಬಗ್ಗೆ ಎಫ್ಐಆರ್ ದಾಖಲಾಗಿದೆ.