ಅಯೋಧ್ಯೆ:- ಬಿಹಾರ DCM ಸಾಮ್ರಾಟ್ ಚೌಧರಿ ತಮ್ಮ ಪ್ರತಿಜ್ಞೆಯನ್ನು ಪೂರೈಸಿದ್ದು, ಅಯೋಧ್ಯೆಯಲ್ಲಿ ತಲೆ ಬೋಳಿಸಿ ರಾಮನಿಗೆ ಪೇಟ ಅರ್ಪಣೆ ಮಾಡಿದ್ದಾರೆ.
ಈ ಹಿಂದೆ ಜೆಡಿಯು ಮುಖ್ಯಸ್ಥರಾದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಹಾಘಟಬಂಧನ್ ಮೈತ್ರಿಕೂಟವನ್ನು ತೊರೆದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಪೇಟವನ್ನು ಧರಿಸುವುದಾಗಿ ಪ್ರತಿಜ್ಞೆ ಮಾಡಿದ್ದ ಬಿಹಾರ ಉಪ ಮುಖ್ಯಮಂತ್ರಿ ಮತ್ತು ಬಿಜೆಪಿ ಮುಖಂಡ ಸಾಮ್ರಾಟ್ ಚೌಧರಿ ಅವರು ಇದೀಗ ತಮ್ಮ ಪ್ರತಿಜ್ಞೆಯನ್ನು ನೆನಪಿಸಿಕೊಂಡಿದ್ದು ಅದನ್ನು ಪೂರೈಸಿದ್ದಾರೆ.
ಇದೀಗ ಇಂಡಿ-ಮೈತ್ರಿಕೂಟಕ್ಕೆ ರಾಜೀನಾಮೆ ನೀಡಿದ ನಂತರ ನಿತೀಶ್ ಕುಮಾರ್ ಅವರು ಎನ್ಡಿಎಗೆ ಮರಳಿದ್ದಾರೆ. ಹಾಗಾಗಿ ಸಾಮ್ರಾಟ್ ಚೌಧರಿ ಅವರು ಈಗ ಅಯೋಧ್ಯೆಯಲ್ಲಿ ಭಗವಾನ್ ರಾಮನಿಗೆ ತಮ್ಮ ಮುಡಿಯನ್ನು ಅರ್ಪಿಸಿ ತಮ್ಮ ಪೇಟವನ್ನು ರಾಮನ ಪಾದಗಳಿಗೆ ಅರ್ಪಿಸುವ ಮೂಲಕ ತಮ್ಮ ಪ್ರತಿಜ್ಞೆಯನ್ನು ಪೂರೈಸಿದ್ದಾರೆ
ಈ ಬಗ್ಗೆ ಮಾತನಾಡಿದ ಅವರು ಇಂಡಿ- ಮೈತ್ರಿಕೂಟದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಎನ್ಡಿಎಗೆ ಮರಳಿದ ದಿನ, ನಾನು ನನ್ನ ಪೇಟವನ್ನು ಭಗವಾನ್ ರಾಮನಿಗೆ ಅರ್ಪಿಸುತ್ತೇನೆ ಎಂದು ಘೋಷಿಸಿದೆ. ನಿತೀಶ್ ಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಪೇಟ ಧರಿಸುವುದಾಗಿ ಪ್ರತಿಜ್ಞೆ ಮಾಡಿದ್ದೆ ಎಂಬುದು ನಿಜ. ಆದರೆ ಈಗ ಅವರು ಇಂಡಿ-ಮೈತ್ರಿಕೂಟದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್ಡಿಎ) ಮರಳಿದ್ದಾರೆ, ಹಾಗಾಗಿ ನನ್ನ ಪೇಟವನ್ನು ಭಗವಾನ್ ರಾಮನ ಪಾದಗಳಿಗೆ ಅರ್ಪಿಸುವ ಸಮಯ ಬಂದಿದೆ” ಎಂದು ಹೇಳಿದ್ದಾರೆ