ಹಾಸನ:- ಕರ್ನಾಟಕದಾದ್ಯಂತ ಭಾರೀ ಮಳೆ ಸೂರಿಯುತ್ತಿದ್ದು, ಅದರಂತೆ ಹಾಸನದಲ್ಲೂ ಮಳೆಯು ತನ್ನ ನರ್ತನ ತೋರಿದೆ.
ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಭಾರಿ ಮಳೆ ಮುಂದುವರಿದಿದ್ದು, ನಿರ್ಮಾಣ ಹಂತದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಹಲವೆಡೆ ಭೂ ಕುಸಿತ ಸಂಭವಿಸಿದೆ.
ಶಿರಾಢಿಘಾಟ್ ಮಾರ್ಗದ ಸಕಲೇಶಪುರ ಬೈಪಾಸ್ನಲ್ಲಿ ಹಲವೆಡೆ ದೊಡ್ಡ ದೊಡ್ಡ ಬಂಡೆ ಕಲ್ಲುಗಳ ಜೊತೆ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದಿದೆ. ತಡೆಗೋಡೆ ನಿರ್ಮಿಸದೆ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಿರುವ ಹಲವೆಡೆ ಭೂ ಕುಸಿತ ಸಂಭವಿಸಿದೆ.
ಚತುಷ್ಪತ ರಸ್ತೆಯಲ್ಲಿ ಮಣ್ಣು ಕುಸಿದಿರುವ ಕಾರಣ ಬೈಪಾಸ್ ರಸ್ತೆಯ ಒಂದು ಬದಿಯ ಸಂಚಾರ ಸ್ಥಗಿತಗೊಂಡಿದೆ. ಮತ್ತಷ್ಟು ಮಳೆ ಸುರಿದರೆ ರಸ್ತೆ ಸಂಚಾರವೇ ಬಂದ್ ಆಗುವ ಆತಂಕ ಎದುರಾಗಿದೆ. ಇದರೊಂದಿಗೆ, ಉದ್ಘಾಟನೆಗೂ ಮೊದಲೇ ರಸ್ತೆಯ ಅವ್ಯವಸ್ಥೆ ಬಯಲಾಗಿದೆ.
ನಿರ್ಮಾಣ ಹಂತದಲ್ಲೇ ಹಲವೆಡೆ ಕಾಂಕ್ರೀಟ್ ರಸ್ತೆ ಬಿರುಕುಬಿಟ್ಟಿದೆ. ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆಯ ಗುಣಮಟ್ಟ ಹಾಳಾಗಿರುವ ಬಗ್ಗೆ ಇದೀಗ ಆಕ್ಷೇಪಗಳು ಕೇಳಿಬಂದಿವೆ.
ಗೃಹ ಮಂಡಳಿ ಅಧ್ಯಕ್ಷ, ಅರಸೀಕೆರೆ ಶಾಸಕ ಕೆಎಂ ಶಿವಲಿಂಗೇಗೌಡ ವಿರುದ್ದ ಹಾಸನ ಜಿಲ್ಲೆಯ ಅರಸೀಕೆರೆ ಪಟ್ಟಣದ ಬಾಬಾಸಾಬ್ ಕಾಲೋನಿಯ ನಿವಾಸಿಗಳು ಪೋಸ್ಟರ್ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಚರಂಡಿಗಳಲ್ಲಿ ಮಣ್ಣು ತುಂಬಿಕೊಂಡು ಕೊಳಚೆ ನೀರು ಹರಿಯುತ್ತಿಲ್ಲ. ಅತಿಯಾದ ಶೀತದಿಂದ ವಾಸದ ಮನೆಗಳು ಬಿರುಕು ಬಿಟ್ಟಿವೆ. ಸೊಳ್ಳೆಗಳ ಕಾಟದಿಂದ ಡೆಂಗ್ಯೂ ಜ್ವರ ಸೇರಿ ಹಲವು ಕಾಯಿಲೆಗಳು ಜನರನ್ನು ಬಾಧಿಸುತ್ತಿವೆ. ಸರಿಯಾದ ಚರಂಡಿ, ರಸ್ತೆ ಇಲ್ಲದೆ ಇಲ್ಲದೇ ನಿವಾಸಿಗಳು ಪರದಾಡುವಂತಾಗಿದೆ.