ಕಳೆದ ತಿಂಗಳು ಚಂಡೀಗಢ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಸಂಸದೆ, ನಟಿ ಕಂಗನಾ ರಣಾವತ್ಗೆ ಕೆನ್ನೆಗೆ ಹೊಡೆದ ಅಮಾನತುಗೊಂಡಿದ್ದ ಸಿಐಎಸ್ಎಫ್ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಶಿಸ್ತು ಉಲ್ಲಂಘನೆ ವಿಚಾರಣೆ ಬಾಕಿಯಿರುವಂತೆ ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ CISF ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ
ನಟಿ ಕಂಗನಾ ರಣಾವತ್ಗೆ ಕಪಾಳಮೋಕ್ಷ ಮಾಡಿದ ಸಂಬಂಧ ಸಸ್ಪೆಂಡ್ ಆಗಿದ್ದ ಸಿಐಎಸ್ಎಫ್ ಸಿಬ್ಬಂದಿಯನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ. ಅಲ್ಲದೇ ಅವರನ್ನು ಚಂಡೀಗಢದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿ ಇರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ವರ್ಗಾವಣೆ ಮಾಡಲಾಗಿದೆ. ಬಿಜೆಪಿ ಸಂಸದೆ ಕಂಗನಾ ರಣಾವತ್ಗೆ ಕಪಾಳಮೋಕ್ಷ ಮಾಡಿದ ಆರೋಪದ ಮೇಲೆ ಸಿಐಎಸ್ಎಫ್ ಕಾನ್ಸ್ಟೆಬಲ್ ಕುಲ್ವಿಂದರ್ ಕೌರ್ ಅವರಿಗೆ ಇಲಾಖಾ ವಿಚಾರಣೆ ನಡೆಯುತ್ತಿದೆ ಎಂದು ಸಿಐಎಸ್ಎಫ್ ತಿಳಿಸಿದೆ.
ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ನಟಿ ಕಂಗನಾ ಜೂನ್ 7 ರಂದು ಚಂಡೀಗಢ ವಿಮಾನ ನಿಲ್ದಾಣದಿಂದ ದೆಹಲಿಯತ್ತ ಹೊರಟಿದ್ದರು. ಈ ವೇಳೆ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಸಿಐಎಸ್ಎಫ್ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರು ನಟಿಗೆ ಕಪಾಳಮೋಕ್ಷ ಮಾಡಿದ್ದರು. ಬಳಿಕ ಕುಲ್ವಿಂದರ್ ಕೌರ್ ಅವರನ್ನು ಕೆಲಸದಿಂದ ಅಮಾನತು ಮಾಡಲಾಗಿತ್ತು. ಅಲ್ಲದೇ ರೈತರ ಆಂದೋಲನಕ್ಕೆ ಸಂಬಂಧಿಸಿದಂತೆ ಕಂಗನಾ ಹೇಳಿಕೆಯಿಂದ ಕುಲ್ವಿಂದರ್ ಅವರಿಗೆ ನೋವಾಗಿದೆ. ಈ ಕಾರಣದಿಂದ ಅವರಿ ಕಂಗನಾ ಕೆನ್ನೆಗೆ ಹೊಡೆದಿದ್ದಾರೆ ಎಂದು ಹೇಳಲಾಗಿತ್ತು. ಆ ಬಳಿಕ ಕುಲ್ವಿಂದರ್ ಅವರಿಗೆ ಕೆಲವ ನೀಡುವುದಾಗಿ ಕೆಲವರು ಹೇಳಿಕೊಂಡಿದ್ದರು. ಇದೀಗ ಮತ್ತೆ ಸಿಐಎಸ್ಎಫ್ ಸಿಬ್ಬಂದಿಯನ್ನು ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ.