ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಕಳೆದ ಎರಡು ದಿನಗಳ ಹಿಂದಷ್ಟೇ ಕುಟುಂಬ ಸದಸ್ಯರ ಜೊತೆ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಪ್ರಜ್ವಲ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರು ನಟಿಸಿರುವ, ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಲೋಹಿತ್ ಹೆಚ್ ನಿರ್ದೇಶನದ “ಮಾಫಿಯಾ” ಚಿತ್ರದ ಟೀಸರ್ ಬಿಡುಗಡೆಯಾಗಿದೆ.
ಈ ಮೂಲಕ ನಾಯಕ ಪ್ರಜ್ವಲ್ ದೇವರಾಜ್ ಅವರಿಗೆ “ಮಾಫಿಯಾ” ಚಿತ್ರತಂಡ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದೆ.
ಸಾಕಷ್ಟು ಅದ್ದೂರಿಯಾಗಿ ನಿರ್ಮಾಣವಾಗಿರುವ ಮಾಫಿಯಾ ಸಿನಿಮಾಗೆ ಅನೂಪ್ ಸೀಳಿನ್ ಹಾಗೂ ಗಗನ್ ಬಡೇರಿಯಾ ಸಂಗೀತ ನೀಡಿದ್ದು ಆಗಸ್ಟ್ ನಲ್ಲಿ ತೆರೆಗೆ ಬರಲಿದೆ
ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರು ಕಾಣಿಸಿಕೊಂಡಿದ್ದಾರೆ.