ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿರುವ ನಟ ದರ್ಶನ್ ಎಂಡ್ ಗ್ಯಾಂಗ್ ಸದಸ್ಯರಿಗೆ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆಯಾಗಿದೆ. ವಿಡಿಯೋ ಕಾನ್ಫರೆನ್ಸ್ನಲ್ಲಿ ವಿಚಾರಣೆ ನಡೆಸಿದ ನ್ಯಾಯಾಲಯ ಮಹತ್ವದ ಆದೇಶ ನೀಡಿದ್ದು ಜು 17ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ.
ಕೊಲೆ ಪ್ರಕರಣದ ಆರೋಪಿಗಳನ್ನು ಬೆಂಗಳೂರು ಮತ್ತು ತುಮಕೂರಿನಿಂದ ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ದರ್ಶನ್ ಹಾಗೂ ಉಳಿದ ಸದಸ್ಯರನ್ಉ ಪುರುಷರ ಬ್ಯಾರಕ್ನಿಂದ ಪ್ರಕರಣದ A1 ಆರೋಪಿ ಪವಿತ್ರಗೌಡ ಅವರನ್ನು ಪ್ರತ್ಯೇಕವಾಗಿ ಹಾಜರು ಪಡಿಸಲಾಗಿತ್ತು. ವಿಚಾರಣೆ ಬಳಿಕ ದರ್ಶನ್ ಎಂಡ್ ಗ್ಯಾಂಗ್ ಸದಸ್ಯರನ್ನು ಜುಲೂ 17ರವರೆರೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸರ್ಕಾರದ ಪರವಾಗಿ ನ್ಯಾಯಾಂಗ ಬಂಧನ ವಿಸ್ತರಣೆ ಬಗ್ಗೆ ಕೋರ್ಟ್ಗೆ ರಿಮ್ಯಾಂಡ್ ಕಾಪಿ ಸಲ್ಲಿಕೆ ಮಾಡಲಾಯಿತು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳಿಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಸ್ತರಿಸಿದೆ.
ಇದೇ ವೇಳೆ ಸರ್ಕಾರ ಪರ ವಕೀಲರು ಸಲ್ಲಿಸಿದ ರಿಮ್ಯಾಂಡ್ ಅರ್ಜಿಗೆ ಆರೋಪಿಗಳ ಪರ ವಕೀಲರು ಮನವಿ ಮಾಡಿದರು. ಜಡ್ಜ್ ರಿಮ್ಯಾಂಡ್ ಅರ್ಜಿ ಕಾಪಿಯ ಪ್ರತಿಯನ್ನು ನೀಡಲು ಸರ್ಕಾರದ ಪಿಪಿಗೆ ಸೂಚನೆ ನೀಡಿದರು.
- ಪ್ರಕರಣದ ಎ1 ರಿಂದ ಎ17 ಆರೋಪಿಗಳು ಕೊಲೆ ಮತ್ತು ಸಾಕ್ಷಿ ನಾಶಪಡಿಸಿದಂತ ಒಂದು ಗಂಭೀರ ಪ್ರಕರಣದಲ್ಲಿ ಭಾಗಿಯಾಗಿ ಕೃತ್ಯವೆಸಗಿದ್ದಾರೆ. ಇವರುಗಳಿಗೆ ಕಾನೂನಿನ ಮೇಲೆ ಕಿಂಚಿತ್ತು ಗೌರವ ಇಲ್ಲದೇ ಇರುವುದು ಈವರೆಗಿನ ಸಾಕ್ಷ್ಯಾಧಾರಗಳಿಂದ ದೃಢಪಟ್ಟಿರುತ್ತದೆ.
- ಎ1 ರಿಂದ ಎ17 ಆರೋಪಿಗಳು ಸಮಾನ ಉದ್ದೇಶದಿಂದ ಕೃತ್ಯ ವೆಸಗಲು ಒಳಸಂಚು ರೂಪಿಸಿರುವುದು ಮತ್ತು ಕೃತ್ಯ ನಡೆದ ನಂತರ ಭೌತಿಕ ಮತ್ತು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಗಳನ್ನು ಈಗಾಗಲೇ ನಾಶಪಡಿಸಿರುವುದು ಮತ್ತು ನಾಶಪಡಿಸಲು ಪ್ರಯತ್ನಿಸಿರುವುದು ತನಿಖೆಯಲ್ಲಿ ದೃಢಪಟ್ಟಿರುತ್ತದೆ.
- ಪ್ರಕರಣದ ತನಿಖಾ ಕಾಲದಲ್ಲಿ ಅಮಾನತ್ತು ಪಡಿಸಿಕೊಂಡು ಪರಿಶೀಲಿಸಲಾದ ತಾಂತ್ರಿಕ ಸಾಕ್ಷ್ಯಾಧಾರಗಳಲ್ಲಿ ಎಲ್ಲಾ ಆರೋಪಿಗಳು ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡು ಬಂದಿದೆ. ಇನ್ನೂ ಹಲವಾರು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಾಧಾರಗಳನ್ನು ಪರಿಶೀಲನೆಗೆ ಕಳುಹಿಸಿದ್ದು ವರದಿ ಸಂಗ್ರಹಿಸಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಬೇಕಾಗಿರುತ್ತದೆ.
- ಪ್ರಕರಣವು ಹಾಲಿ ತನಿಖೆಯಲ್ಲಿದ್ದು ಪ್ರಕರಣದಲ್ಲಿ ಎಲ್ಲಾ ಆರೋಪಿಗಳ ಕೃತ್ಯದಲ್ಲಿನ ಅವರ ಸಂಪೂರ್ಣ ಪಾತ್ರದ ಬಗ್ಗೆ ಹೆಚ್ಚಿನ ವಿಷಯಗಳನ್ನು ತಿಳಿಯಬೇಕಾಗಿದ್ದು ಈ ಬಗ್ಗೆ ತನಿಖೆ ಮುಂದುವರೆದಿರುತ್ತದೆ.
- ಪ್ರಕರಣದಲ್ಲಿ ಈವರೆಗೆ 83.65.500/- ರೂಗಳನ್ನು ಆರೋಪಿಗಳಿಂದ ವಶಪಡಿಸಿಕೊಂಡಿದ್ದು ಸದರಿ ಹಣವನ್ನು ಆರೋಪಿಗಳಿಗೆ ನೀಡಿರುವ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಿ ಹೇಳಿಕೆಗಳನ್ನು ಪಡೆದುಕೊಳ್ಳಬೇಕಾಗಿರುತ್ತದೆ. ಹಾಗೂ ಹಣದ ಮೂಲದ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಬೇಕಾಗಿರುತ್ತದೆ.
- ಪ್ರಕರಣದ ತನಿಖಾ ಕಾಲದಲ್ಲಿ ಅಮಾನತು ಪಡಿಸಿಕೊಂಡು ಪರಿಶೀಲಿಸಲಾದ ತಾಂತ್ರಿಕ ಸಾಕ್ಷ್ಯಾಧಾರಗಳಲ್ಲಿ ಎಲ್ಲಾ ಆರೋಪಿಗಳು ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡು ಬಂದಿದೆ. ಇನ್ನೂ ಹಲವಾರು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಾಧಾರಗಳನ್ನು ಪರಿಶೀಲನೆಗೆ ಕಳುಹಿಸಿದ್ದು ವರದಿ ಸಂಗ್ರಹಿಸಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಬೇಕಾಗಿರುತ್ತದೆ.
- ಪ್ರತ್ಯಕ್ಷ ಸಾಕ್ಷಿದಾರರಿಂದ ಎ-15 ಹಾಗೂ ಎ17 ಆರೋಪಿಗಳು ಸೇರಿದಂತೆ ಇತರೆ ಆರೋಪಿಗಳ ಗುರುತಿನ ಕವಾಯತನ್ನು ಕಾರ್ಯನಿರ್ವಾಹಕ ದಂಡಾಧಿಕಾರಿಗಳಿಂದ ನಡೆಸಬೇಕಾಗಿರುತ್ತದೆ. ಈ ಹಂತದಲ್ಲಿ ಆರೋಪಿಗಳಿಗೆ ಜಾಮೀನು ನೀಡದಲ್ಲಿ ಪ್ರಕರಣದ ತನಿಖೆಗೆ ಆಡಚಣೆ ಉಂಟಾಗುತ್ತದೆ.
- ಪ್ರಕರಣದಲ್ಲಿ ಆರೋಪಿಗಳು ಕೃತ್ಯಕ್ಕೆ ಉಪಯೋಗಿಸಿದ್ದ ಹಾಗೂ ಸಾಕ್ಷ್ಯ ನಾಶಕ್ಕೆ ಉಪಯೋಗಿಸಿದ್ದ ಮತ್ತು ಮೃತದೇಹವನ್ನು ವಿಲೇವಾರಿ ಮಾಡಲು ಉಪಯೋಗಿಸಿದ್ದ ವಾಹನಗಳನ್ನು ಆರ್.ಟಿ.ಓ ಅಧಿಕಾರಿಗಳಿಂದ ಪರಿಶೀಲನೆ ಮಾಡಿಸಿ ಪರಿಶೀಲನಾ ವರದಿಯನ್ನು ಪಡೆದುಕೊಳ್ಳಬೇಕಾಗಿರುತ್ತದೆ. ಹಾಗೂ ವಾಹನ ಮಾಲೀಕರುಗಳ ವಿವರಗಳನ್ನು ಪಡೆದುಕೊಂಡು ಮೂಲ ಮಾಲೀಕರುಗಳ ಹೇಳಿಕೆಗಳನ್ನು ಪಡೆದುಕೊಳ್ಳಬೇಕಾಗಿರುತ್ತದೆ.
- ಪ್ರಕರಣದಲ್ಲಿ ಆರೋಪಿಗಳಿಗೆ ಸಂಬಂಧಿಸಿದ ಮೊಬೈಲ್ಗಳನ್ನು ರಿಟ್ರೇವ್ ಮಾಡಿಸಿ ಸಿ.ಎಪ್.ಎಸ್.ಎಲ್ ಹೈದ್ರಾಬಾದ್ಗೆ ಕಳುಹಿಸಿ ಕೊಟ್ಟಿದ್ದು ವರದಿಯನ್ನು ಪಡೆದುಕೊಳ್ಳಬೇಕಾಗಿರುತ್ತದೆ.
- ಪ್ರಕರಣದಲ್ಲಿ ಇನ್ನೂ ಕೆಲವು ಆರೋಪಿಗಳ ಹಾಗೂ ಸಾಕ್ಷಿದಾರರುಗಳ ಮೊಬೈಲ್ ಫೋನ್ಗಳನ್ನು ರಿಟ್ರೇವ್ ಮಾಡಿಸಿ ಪರೀಕ್ಷೆಗಾಗಿ ಸಿ.ಎಫ್.ಎಸ್.ಎಲ್ಗೆ ಕಳುಹಿಸಿಕೊಟ್ಟು ವರದಿಯನ್ನು ಪಡೆದುಕೊಳ್ಳಬೇಕಾಗಿರುತ್ತದೆ.
- ಪ್ರಕರಣದಲ್ಲಿ ಅಮಾನತು ಪಡಿಸಿದ್ದ ಡಿ.ವಿ.ಆರ್ಗಳನ್ನು ರಿಟ್ರೇವ್ ಮಾಡಿಸಿ ನಂತರ ಆರೋಪಿಗಳು ನೇರವಾಗಿ ಕೃತ್ಯದಲ್ಲಿ ಭಾಗಿಯಾಗಿರುವ ಬಗ್ಗೆ ಸಾಕ್ಷ್ಯಗಳನ್ನು ಸಂಗ್ರಹಿಸಿ FSLಗೆ ಕಳುಹಿಸಿ ವರದಿಯನ್ನು ಪಡೆದುಕೊಳ್ಳಬೇಕಾಗಿರುತ್ತದೆ.
- ಪ್ರಕರಣದಲ್ಲಿ ಆರೋಪಿಗಳು ಕೃತ್ಯಕ್ಕೆ ಮೊದಲು ಹಾಗೂ ಕೃತ್ಯದ ಸಮಯದಲ್ಲಿ ಹಾಗೂ ಕೃತ್ಯದ ನಂತರ ಹಲವಾರು ವ್ಯಕ್ತಿಗಳನ್ನು ಸಂಪರ್ಕಿಸಿದ್ದು ಸದರಿ ಸಾಕ್ಷಿದಾರರುಗಳನ್ನು ವಿಚಾರಣೆ ಮಾಡಿ ಸಾಕ್ಷ್ಯ ನಾಶದ ಬಗ್ಗೆ ಹೇಳಿಕೆಗಳನ್ನು ಪಡೆದುಕೊಳ್ಳಬೇಕಾಗಿರುತ್ತದೆ. ಈ ಸಮಯದಲ್ಲಿ ಆರೋಪಿಗಳಿಗೆ ಜಾಮೀನು ನೀಡಿದ್ದಲ್ಲಿ ಸಾಕ್ಷ್ಯ, ನಾಶ ಮಾಡುವ ಸಾಧ್ಯತೆ ಹೆಚ್ಚಾಗಿರುತ್ತದೆ.
- ಪ್ರಕರಣದ ಆರೋಪಿಗಳು ಪ್ರಭಾವಿಗಳು ಹಾಗೂ ಹಣ ಬಲ ಮತ್ತು ಅಭಿಮಾನಿ ಬಳಗವನ್ನು ಹೊಂದಿದ್ದು ಪ್ರಕರಣದಲ್ಲಿ ಇನ್ನೂ ಹಲವಾರು ಪ್ರತ್ಯಕ್ಷ ಹಾಗೂ ಪರೋಕ್ಷ ಸಾಕ್ಷ್ಯಗಳನ್ನು ಸಂಗ್ರಹಿಸಬೇಕಾಗಿರುತ್ತದೆ. ಈ ಸಮಯದಲ್ಲಿ ಆರೋಪಿಗಳಿಗೆ ಜಾಮೀನು ನೀಡಿದ್ದಲ್ಲಿ ತಮ್ಮ ಪ್ರಭಾವಗಳನ್ನು ಬಳಸಿ ಪ್ರಕರಣದ ಸಾಕ್ಷಿದಾರರುಗಳಿಗೆ ಬೆದರಿಕೆ ಹಾಕುವ ಮತ್ತು ವ್ಯವಸ್ಥಿತ ರೀತಿಯನ್ನು ಸಾಕ್ಷ್ಯನಾಶ ಪಡಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.
- ಪ್ರಕರಣದಲ್ಲಿ ಕೆಲವು ಆರೋಪಿಗಳು ಬೇರೆಯವರ ಹೆಸರಿನಲ್ಲಿರುವ ಸಿಮ್ಗಳನ್ನು ಉಪಯೋಗಿಸುತ್ತಿರುವುದು ಹಾಗೂ ಸಾಕ್ಷಿದಾರರುಗಳು ಸಹ ಬೇರೆಯವರ ಹೆಸರಿನಲ್ಲಿರುವ ಸಿಮ್ ಗಳನ್ನು ಉಪಯೋಗಿಸಿರುವುದು ತನಿಖೆಯಲ್ಲಿ ತಿಳಿದು ಬಂದಿದ್ದು ಮೂಲ ಸಿಮ್ ಮಾಲೀಕರುಗಳ ಹೇಳಿಕೆಗಳನ್ನು ಪಡೆದುಕೊಳ್ಳಬೇಕಾಗಿರುತ್ತದೆ.
15. ಪ್ರಕರಣದಲ್ಲಿ ಇನ್ನೂ ಹಲವಾರು ಪ್ರತ್ಯಕ್ಷ ಹಾಗೂ ಪರೋಕ್ಷ ಸಾಕ್ಷಿದಾರರುಗಳನ್ನು ವಿಚಾರಣೆ ಮಾಡಿ ಹೇಳಿಕೆಗಳನ್ನು ಹಾಗೂ ಕಲಂ 164 ಆಡಿ ಹೇಳಿಕೆಗಳನ್ನು ಪಡೆದುಕೊಳ್ಳಬೇಕಾಗಿದೆ. ಪ್ರಕರಣವು ತನಿಖಾ ಹಂತದಲ್ಲಿರುವುದರಿಂದ ಆರೋಪಿಗಳಿಗೆ ಈ ಹಂತದಲ್ಲಿ ಜಾಮೀನು ನೀಡಿದಲ್ಲಿ ಪ್ರಕರಣದ ತನಿಖೆಗೆ ಹಿನ್ನಡೆಯಾಗುವ ಹಾಗೂ ಆರೋಪಿಗಳು ವ್ಯವಸ್ಥಿತ ರೀತಿಯಲ್ಲಿ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದು ತಿಳಿಸಿದ್ದಾರೆ.