ಬ್ರಿಟನ್ ಸಂಸತ್ತಿಗೆ ಗುರುವಾರ ಸಾರ್ವತ್ರಿಕ ಚುನಾವಣೆ ನಡೆದಿದೆ. ಬರೋಬ್ಬರಿ 14 ವರ್ಷಗಳ ಬಳಿಕ ಭರ್ಜರಿ ಜಯದೊಂದಿಗೆ ಅಧಿಕಾರಕ್ಕೆ ಮರಳುವ ವಿಶ್ವಾಸವನ್ನು ವಿರೋಧ ಪಕ್ಷವಾದ ಲೇಬರ್ ಪಾರ್ಟಿ ವ್ಯಕ್ತಪಡಿಸಿದೆ.
ಇನ್ನೂ ಆರು ತಿಂಗಳು ಅಧಿಕಾರವಧಿ ಇದ್ದರೂ ಅವಧಿಪೂರ್ವ ಚುನಾವಣೆಗೆ ಹೋಗುವ ಮೂಲಕ ರಿಷಿ ಸುನಕ್ ಅಚ್ಚರಿ ಮೂಡಿಸಿದ್ದರು. ಪ್ರಾಥಮಿಕ ವಿಶ್ಲೇಷಣೆ ಪ್ರಕಾರ, ವಿರೋಧಪಕ್ಷ ಲೇಬರ್ ಪಾರ್ಟಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆಗಳಿವೆ.
ಆಡಳಿತ ವಿರೋಧಿ ಅಲೆಯ ಭೀತಿಯಲ್ಲಿರುವ ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷ ಅಧಿಕಾರವನ್ನು ಉಳಿಸಿಕೊಳ್ಳಲು ಯತ್ನಿಸುತ್ತಿದೆ. ಈ ಚುನಾವಣೆ ಮೂಲಕ ಭಾರತ ಮೂಲದ ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಅವರ ರಾಜಕೀಯ ಭವಿಷ್ಯವೂ ತೂಗುಯ್ಯಾಲೆಯಲ್ಲಿದೆ.