ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಸರ್ಕಾರದಿಂದ ಮತ್ತೊಂದು ದಂಡ ಪ್ರಯೋಗ ಮಾಡಲಾಗಿದೆ.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ , ಎಲ್ಲೆಂದರಲ್ಲಿ ಕಸ ಬಿಸಾಡುವವರಿಗೆ ದಂಡ ಪ್ರಯೋಗ ಮಾಡಲಾಗುತ್ತದೆ. ಎಲ್ಲೆಂದರಲ್ಲಿ ಕಸ ಮತ್ತು ಸ್ವಚ್ಛತೆ ಕಾಪಾಡದವರಿಗೆ ದಂಡದ ಮೊತ್ತ 50 ರೂ. ನಿಂದ 500 ರೂ. ವರೆಗೆ ಏರಿಕೆ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಈ ಕುರಿತು ಆರೋಗ್ಯ ಇಲಾಖೆ ಸದ್ಯದಲ್ಲೇ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಿಗೂ ಆದೇಶ ಹೊರಡಿಸಲಿದೆ. ನಿನ್ನೆ ಆರೋಗ್ಯ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದರು