ಹುಬ್ಬಳ್ಳಿ: ಇಲ್ಲಿನ ರಾಜನಗರ ಕೇಂದ್ರಿಯ ವಿದ್ಯಾಲಯದ ಎದುರು ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿದ್ದ ಐವರು ಅಪ್ರಾ- ಪ್ತರನ್ನು ಅಶೋಕನಗರ ಠಾಣೆ ಪೊಲೀಸರು ವಿಚಾರಣೆಗಾಗಿ ಒಬ್ಬನನ್ನು ಬಂಧಿಸಿದ್ದಾರೆ. ಕರೆದೊಯ್ದಿದ್ದು,
ವಿದ್ಯಾರ್ಥಿ ಮೇಲೆ ಐದಾರು ಮಂದಿ ಹಲ್ಲೆ ನಡೆಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಆಗಿತ್ತು.
ವಿಡಿಯೊ ಆಧರಿಸಿ ಪ್ರಾಚಾರ್ಯರು ಭಾನುವಾರ ಪ್ರಕರಣ ದಾಖಲಿಸಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಹಲ್ಲೆ ಮಾಡಿದ ಹುಡುಗರ ಬಗ್ಗೆ ಮಾಹಿತಿ ಕಲೆ ಹಾಕಿ, ಕಾನೂನು ಕ್ರಮ ವಹಿಸುತ್ತಿದ್ದಾರೆ. ಚಾಲುಕ್ಕನಗರದ ಫ್ರಾನ್ಸಿಸ್ ಉಡಮಿಲ್ ಎಂಬಾತನನ್ನು ಬಂಧಿಸಿ ಕ್ರಮಕೈಗೊಂಡಿದ್ದಾರೆ.
ಯುವತಿಯೊಂದಿಗೆ ಮಾತನಾಡುತ್ತಿದ್ದ ವಿಷಯಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ನಂತರ ವಿದ್ಯಾರ್ಥಿಗಳ ಗುಂಪು ಒಬ್ಬ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದೆ. ಹಲ್ಲೆ ಮಾಡಿದವರು ಹುಬ್ಬಳ್ಳಿ ನಗರದ ವಿವಿಧ ಶಾಲಾ-ಕಾಲೇಜುಗಳಿಗೆ ಸೇರಿದ ವಿದ್ಯಾರ್ಥಿಗಳಾಗಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.’
ಪ್ರಕರಣದಲ್ಲಿ ಭಾಗಿಯಾದ ಅಪ್ರಾಪ್ತರ ಮತ್ತು ಬಂಧಿತನೊಬ್ಬ ಓದುತ್ತಿದ್ದ ಪ್ರಾಚಾರ್ಯರೊಂದಿಗೆ ಶಾಲಾ-ಕಾಲೇಜಿನ ಮತ್ತು ಪೋಷಕರೊಂದಿಗೆ ತುರ್ತು ಸಭೆ ನಡೆಸಿ ಎಚ್ಚರಿಕೆ ನೀಡಲಾಗಿದೆ. ಇನ್ನು ಮುಂದೆ ಯಾವುದೇ ರೀತಿ ಕಾನೂನು ವಿರೋಧಿ ಕೃತ್ಯಗಳಲ್ಲಿ ಭಾಗಿಯಾಗದಂತೆ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಲಾಗಿದೆ
ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡಬೇಕು ಎಂದುಸೂಚಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ನಗರ ವ್ಯಾಪ್ತಿಯಲ್ಲಿನ ಎಲ್ಲ ಶಾಲಾ-ಕಾಲೇ ಜುಗಳ ಒಳ ಮತ್ತು ಹೊರ ಆವರಣದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಿಕೊಳ್ಳುವಂತೆ ಶಾಲಾ ಆಡಳಿತ ಮಂಡಳಿಗೆ ಹೇಳಲಾಗಿದೆ’ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.