ಗದಗ:- ಮುಡಾ ಪ್ರಕರಣ ಸಿಬಿಐ ಅಥವಾ ನ್ಯಾಯಾಧೀಶರಿಂದ ತನಿಖೆಯಾಗಲಿ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಮುಡಾ ಪ್ರಕರಣದಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ಹಾಗಿದ್ದರೆ ಇದರ ಬಗ್ಗೆ ಸ್ವತಂತ್ರ ಸಂಸ್ಥೆಯಿಂದ ತನಿಖೆಯಾಗಬೇಕು. ಒಂದು ಸಿಬಿಐ ಅಥವಾ ನ್ಯಾಯಾಧೀಶರಿಂದ ತನಿಖೆಯಾಗಬೇಕು. ಬೇರೆ ಬೇರೆ ಸರ್ಕಾರದ ಸ್ಕೀಂನಲ್ಲಿ ಜಮೀನು ಹಂಚಿಕೆಯಾಗಿರುತ್ತದೆ. ಸ್ಕೀಮ್ನ ನ್ಯಾಯ ಸಮ್ಮತವಾಗಿ ಮಾಡಿಕೊಂಡಿದ್ದರೆ ತಕರಾರಿಲ್ಲ. ಆದರೆ ಸ್ಕೀಂ ಬದಲಾವಣೆ ಮಾಡಿಕೊಂಡರೆ ತನಿಖೆಯಿಂದ ಹೊರಬರುತ್ತದೆ ಎಂದು ಹೇಳಿದರು
ಡೆಂಗ್ಯೂ ಜ್ವರ ಎದುರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಸರ್ಕಾರ ಬಡವರ ಜೀವನದ ಜೊತೆ ಚೆಲ್ಲಾಟ ಆಡುತ್ತಿದೆ. ಡೆಂಗ್ಯೂ ಪ್ರಕರಣಗಳು ಒಂದೂವರೆ ತಿಂಗಳಿನಿಂದ ಪ್ರಾರಂಭವಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ, ಆರೋಗ್ಯ ಇಲಾಖೆ, ಡಿಹೆಚ್ಓಗಳು ತೆಗೆದುಕೊಳ್ಳಬೇಕಿತ್ತು. ಆದರೆ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ ಕೈಗೊಂಡಿಲ್ಲ ಎಂದು ಆರೋಪಿಸಿದರು.