ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ (Renukaswamy) ಹತ್ಯೆಯಾಗಿ ಇಂದಿಗೆ ಒಂದು ತಿಂಗಳು ಕಳೆದಿದೆ. ಈ ನಡುವೆ ಅವಧಿಗೂ ಮುನ್ನ ಚಾರ್ಜ್ಶೀಟ್ ಸಲ್ಲಿಸಲು ಪೊಲೀಸರು ತಯಾರಿ ನಡೆಸುತ್ತಿದ್ದಾರೆ.
ಈ ಬಗ್ಗೆ ಮಾಧ್ಯಮದವರು ಗೃಹ ಸಚಿವರನ್ನ ಕೇಳಿದಾಗ , ಅದಕ್ಕೇನು ಮಾಡಬೇಕು? ಅಂತ ಕೇಳುತ್ತಾರೆ. ಮಾಧ್ಯಮದವರು ಕೇಳಿದರೂಂತ ಪ್ರಕರಣವನ್ನು ಫಾಸ್ಟ್ ಫಾರ್ವರ್ಡ್ ಮಾಡಲಾಗುತ್ತಾ? ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ ಜೈಲಿನಲ್ಲಿರಿಸಲಾಗಿದೆ, ತನಿಖಾಧಿಕಾರಿಗಳಿಂದ ಸಾಕ್ಷ್ಯ, ಪುರಾವೆ ಸಂಗ್ರಹಿಸುವ ಕೆಲಸ ನಡೆಯುತ್ತಿದೆ.
ಈ ಪ್ರಕ್ರಿಯೆಗೆ ಸಮಯ ಹಿಡಿಯುತ್ತದೆ, ಅದೆಲ್ಲ ಮುಗಿದ ಬಳಿಕ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಲಾಗುತ್ತದೆ ಎಂದು ಪರಮೇಶ್ವರ್ ಹೇಳಿದರು. ಸರ್ಕಾರ ಯಾರನ್ನೂ ರಕ್ಷಣೆ ಮಾಡುವ ಕೆಲಸ ಮಾಡುತ್ತಿಲ್ಲ ಎಂದು ಹೇಳಿದ ಗೃಹ ಸಚಿವ, ಪಿಎಸ್ಐ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮರುಪರೀಕ್ಷೆ ನಡೆಸಲಾಗಿದ್ದು ನೇಮಕಾತಿ ಆದೇಶಗಳನ್ನು ಜಾರಿ ಮಾಡುವ ಕೆಲಸ ಇಷ್ಟರಲ್ಲೇ ಆರಂಭವಾಗಲಿದೆ ಎಂದು ಹೇಳಿದರು.