ಚಿಕ್ಕೋಡಿ: ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿದ ಭೀಕರ ಮಳೆಯಿಂದ ಹಲವು ಪ್ರದೇಶಗಳು ಜಲಾವೃತವಾಗಿದೆ. ನಗರದಲ್ಲಿ ರಾತ್ರಿಯಿಡೀ ಭಾರಿ ಮಳೆಯಾಗಿದ್ದು ನಗರದ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಮತ್ತೊಂದು ಸಂಪರ್ಕ ಸೇತುವೆ ಜಲಾವೃತವಾಗಿದ್ದು,
ಈ ವರೆಗೂ ಜಿಲ್ಲೆಯಲ್ಲಿ ಐದು ಸಂಪರ್ಕ ಸೇತುವೆ ಮುಳುಗಡೆಯಾಗಿದೆ. ದೂದಗಂಗಾ ನದಿಯ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರಿಂದ ಚಿಕ್ಕೋಡಿ ತಾಲೂಕಿನ ಮಲ್ಲಿಕವಾಡ-ದತ್ತವಾಡ ಸಂಪರ್ಕ ಸೇತುವೆ ಜಲಾವೃತವಾಗಿದ್ದು, ಇತ್ತ ಮುಳುಗಡೆಯಾದ ಸೇತುವೆ ಮೇಲೆ ಜನರ ಓಡಾಡುತ್ತಿದ್ದಾರೆ.