ದಾವಣಗೆರೆ:- ಹೊನ್ನಾಳಿ ತಾಲೂಕಿನ ಅರಕೆರೆ ಸಮೀಪದ ಫಾರೆಸ್ಟ್ನಲ್ಲಿ ಬಿಜೆಪಿ ಮುಖಂಡ ಬಿಸಿ ಪಾಟೀಲ್ ಅವರ ಅಳಿಯ ಪ್ರತಾಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆದರೆ ಇದು ನಿಜಕ್ಕೂ ಆತ್ಮಹತ್ಯೆಯಾ ಎಂಬೆಲ್ಲಾ ಪ್ರಶ್ನೆ ಹುಟ್ಟಿದ್ದು, ಈ ಬಗ್ಗೆ ದಾವಣಗೆರೆ ಎಸ್ಪಿ ಮಾತನಾಡಿ, ಆತ್ಮಹತ್ಯೆ ಮಾಡಿಕೊಂಡ ಪ್ರತಾಪ್ ಕುಮಾರ್ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕತ್ತಲಗೆರೆ ಗ್ರಾಮದ ನಿವಾಸಿ. ವೈಯಕ್ತಿಕ ಕಾರಣಕ್ಕೆ ವಿಷ ಸೇವಿಸಿದ್ದಾರೆ. ಅವರು ಶಿವಮೊಗ್ಗ ಕಡೆಯಿಂದ ಕಾರಿನಲ್ಲಿ ಒಬ್ಬರೇ ಬಂದು ಕ್ರಿಮಿನಾಶಕ ಔಷಧಿ ಕುಡಿದಿದ್ದಾರೆ. ಕುಡಿದು ಕಾರ್ ನಲ್ಲಿ ಅಸ್ವಸ್ಥರಾಗಿದ್ದರು. ಮೃತರ ಸಹೋದರ ಪ್ರಭು ಎಂಬುಬದರು ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಪೊಲೀಸರು ಸ್ಥಳಕ್ಕೆ ಹೋಗಿ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು.
ಹೊನ್ನಾಳಿ ನಂತರ ಶಿವಮೊಗ್ಗ ಆಸ್ಪತ್ರೆ ಗೆ ದಾಖಲಿಸಲಾಗಿದೆ. ಆದ್ರೆ ಚಿಕಿತ್ಸೆ ಫಲಕಾರಿ ಅಗದೇ ಸಾವನ್ನಪ್ಪಿದ್ದಾರೆ. ಇವರು ಕೃಷಿ ಹಾಗೂ ಇತರೇ ವ್ಯವಹಾರ ಮಾಡಿಕೊಂಡಿದ್ದರು. ಮೇಲ್ನೋಟಕ್ಕೆ ಇದೊಂದು ವೈಯಕ್ತಿಕ ಕಾರಣದಿಂದ ನಡೆದ ಘಟನೆ. ಯಾವುದೇ ರೀತಿಯ ಡೆತ್ ನೋಟ್ ಪತ್ತೆಯಾಗಿಲ್ಲ. ಸದ್ಯ ಮೊಬೈಲ್ ವಶಕ್ಕೆ ಪಡೆಯಲಾಗಿದ್ದು. ಪರಿಶೀಲನೆ ಮಾಡಲಾಗುವುದು. ಇನ್ನು ಇನ್ನೂ ದೂರು ಕೊಟ್ಟಿಲ್ಲ. ದೂರು ನೀಡಿದ ಬಳಿಕ ಪ್ರಕರಣದ ಕುರಿತು ತನಿಖೆ ನಡೆಸಲಾಗಿವುದು ತಿಳಿಸಿದ್ದಾರೆ.
ಇನ್ನೂ ಪ್ರತಾಪ್ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂಬ ವಿಚಾರವನ್ನು ಮೃತನ ಸಹೋದರ ಪೊಲೀಸರಿಗೆ ತಿಳಿಸಿ ಬಳಿಕ ಬಿ. ಸಿ ಪಾಟೀಲ್ ಅವರಿಗೂ ವಿಚಾರ ಮುಟ್ಟಿಸಿದ್ದಾರೆ. ಬಳಿಕ ಬಿ.ಸಿ ಪಾಟೀಲ್ ಅಳಿಯನ ಮೊಬೈಲ್ ನಂಬರ್ ಹಾಗೂ ಕಾರು ನಂಬರ್ ಕೊಟ್ಟಿದ್ದಾರೆ. ನಮ್ಮ ಅಳಿಯ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಹೇಳಿದ್ದಾರೆ. ಕೂಡಲೇ ಅಳಿಯನನ್ನು ಪತ್ತೆ ಹಚ್ಚುವಂತೆ ಮನವಿ ಮಾಡಿಕೊಂಡಿದ್ದಾರೆ. ಕೂಡಲೇ ಶಿವಮೊಗ್ಗ ಪೊಲೀಸರು ಕಾರ್ ನಂಬರ್ ಹಾಗೂ ಮೊಬೈಲ್ ನಂಬರ್ ಟ್ರೇಸ್ ಮಾಡಿ ಪತ್ತೆ ಹಚ್ಚಿದ್ದಾರೆ. ಮಧ್ಯಾಹ್ನ 3 ಘಂಟೆ ಸುಮಾರಿಗೆ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ಕಾರು ಪತ್ತೆಯಾಗಿದೆ. ಆ ಸಮಯದಲ್ಲಿ ಪ್ರತಾಪ್ ಕುಮಾರ್ ಕಾರಿನಲ್ಲಿ ವಿಷ ಸೇವಿಸಿ ನರಳಾಡುತ್ತಿದ್ದರಂತೆ. ಕೂಡಲೇ ಪೊಲೀಸರು ಹೊನ್ನಾಳಿ ಸರ್ಕಾರಿ ಆಸ್ಪತ್ರೆಗೆ ಪ್ರತಾಪ್ ಅವರನ್ನು ದಾಖಲಿಸಿದ್ದಾರೆ. ಅವರ ಸ್ಥಿತಿ ಕ್ರಿಟಿಕಲ್ ಕಂಡಿಷನ್ ಇದ್ದಿದ್ರಿಂದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಕುಮಾರ್ ಸಾವನ್ನಪ್ಪಿದ್ದಾರೆ.