ವಾಹನ ಸವಾರರು ನೋಡಲೇಬೇಕಾದ ಸುದ್ದಿ ಇದು. ವೈಟ್ ಫೀಲ್ಡ್ನ ಪಣತ್ತೂರು ದಿಣ್ಣೆಯಿಂದ ಪಣತ್ತೂರು ರೈಲ್ವೆ ಬ್ರಿಡ್ಜ್ ವರೆಗಿನ ರಸ್ತೆಯಲ್ಲಿ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಾಲ್ಕು ದಿನಗಳ ಕಾಲ ನಿರ್ಬಂಧಿಸಲಾಗಿದೆ.
ಬೆಂಗಳೂರು ಸಂಚಾರ ಪೊಲೀಸ್ ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿ ಮಾಹಿತಿ ನೀಡಿದೆ. ವೈಟ್ ಫೀಲ್ಡ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಪಣತ್ತೂರು ರೈಲ್ವೇಬ್ರಿಡ್ಜ್ ಬಳಿ ರೈಲ್ವೆ ಇಲಾಖೆಯ ವತಿಯಿಂದ ಅಂಡರ್ಪಾಸ್ ನಿರ್ಮಾಣ ಕಾಮಗಾರಿ ನಡೆಯುತ್ತಿರುವುದರಿಂದ ಪಣತ್ತೂರು ದಿಣ್ಣೆಯಿಂದ ಪಣತ್ತೂರು ರೈಲ್ವೆ ಬ್ರಿಡ್ಜ್ವರೆಗಿನ ರಸ್ತೆಯಲ್ಲಿ ಸಂಚಾರವನ್ನು ಮಂಗಳವಾರ ಜುಲೈ 12 ವರೆಗೆ ಎಲ್ಲ ರೀತಿಯ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಪರ್ಯಾಯ ಮಾರ್ಗ ಇಲ್ಲಿದೆ.
ಪಣತ್ತೂರು ದಿಣ್ಣೆ ಕಡೆಯಿಂದ ಪಣತ್ತೂರು ಮತ್ತು ಕುಂದಲಹಳ್ಳಿ ಕಡೆಗೆ ಹೋಗುವ ವಾಹನ ಸವಾರರು ಗುಂಜೂರು ಪಾಳ್ಯ ರಸ್ತೆಯಿಂದ ಸಿಲ್ವರ್ ಓಕ್ ರಸ್ತೆ ಮುಖಾಂತರ ಬಳಗೆರೆ ಮುಖ್ಯರಸ್ತೆಯನ್ನು ಬಳಸಿ ಪಣತ್ತೂರು
ಹಾಗೂ ಕುಂದಲಹಳ್ಳಿ, ಕಡೆಗೆ ಸಂಚರಿಸಬಹುದಾಗಿದೆ.
ಪಣತ್ತೂರು ಕಡೆಯಿಂದ ಪಣತ್ತೂರು ದಿಣ್ಣೆ ಕಡೆಗೆ ಹೋಗುವ ವಾಹನ ಸವಾರರು ಬಳಗೆರೆ ಮುಖ್ಯರಸ್ತೆಯಿಂದ ಸಿಲ್ವರ್ ಓಕ್ ಮುಖಾಂತರ ಗುಂಜೂರು ಪಾಳ್ಯ ರಸ್ತೆಯನ್ನು ಬಳಸಿ ಪಣತ್ತೂರು ದಿಣ್ಣೆ ಕಡೆಗೆ ಸಂಚರಿಸಬಹುದಾಗಿದೆ.
ಸೋಮವಾರ ಸಾಯಂಕಾಲ ಬೆಂಗಳೂರು ಮಹಾನಗರದ ಹಲವೆಡೆ ಭಾರಿ ಮಳೆ ಸುರಿದಿದೆ. ಇದರಿಂದ ರಸ್ತೆಯಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಕಚೇರಿಯಿಂದ ಮನೆಗ ತೆರಳು ಉದ್ಯೋಗಿಗಳು ಪರದಾಡಿದರು. ಅನೇಕ ಕಡೆ ನಿಧಾನಗತಿಯ ವಾಹನ ಸಾಂಚಾರ ಇದ್ದರೆ, ಕೆಲವು ಅಂಡರ್ ಪಾಸ್ಗಳನ್ನು ಮುಚ್ಚಲಾಗಿತ್ತು.