ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ವಿಚಾರಕ್ಕೆ ಜೆಡಿಎಸ್ ವಿರೋಧ ವ್ಯಕ್ತಪಡಿಸಿದೆ. ಇದಕ್ಕೆ ಸಂಬಂಧಿಸಿ ರಾಮನಗರ ಶಾಸಕ ಇಕ್ಬಾಲ್ ಹುಸೇಸ್ ಪ್ರತಿಕ್ರಿಯೆ ನೀಡಿದ್ದಾರೆ.
ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ನಾವೆಲ್ಲರೂ ಮೂಲತಃ ಬೆಂಗಳೂರು ಜಿಲ್ಲೆಯವರು.
ಕೆಲವರು ಅವರಿಗೋಸ್ಕರ ಪ್ರತ್ಯೇಕ ಜಿಲ್ಲೆ ಮಾಡಿದ್ರು ಅದು ಹೆಸರಿಗೋಸ್ಕರ! ಇದು ಕಾರ್ಯಗತ ಆಗ್ಲಿಲ್ಲ, ಈಗ ಮತ್ತೆ ಬೆಂಗಳೂರು ಜಿಲ್ಲೆಗೆ ಸೇರ್ಪಡೆಯಾಗುತ್ತಿದ್ದೇವೆ.
ಇದಾದ ನಂತರ ಜಿಲ್ಲೆಯನ್ನು ಬೇಕಾದ ರೀತಿಯಲ್ಲಿ ಅಭಿವೃದ್ದಿ ಮಾಡಲು ಅವಕಾಶವಿದೆ. ಈ ನಿಟ್ಟಿನಲ್ಲಿ ಹೆಮ್ಮೆಯಿಂದ ನಾವು ಬೆಂಗಳೂರು ಜಿಲ್ಲೆಯವರು ಎಂದು ಹೇಳಿಕೊಳ್ಳುವುದಕ್ಕೆ ನಾವು ಇಂದು ಸರ್ಕಾರಕ್ಕೆ ನಮ್ಮ ನಾಯಕರು ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಸೇರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿಯನ್ನು ನೀಡಿದ್ದೇವೆ ಎಂದರು